ಶಿವಮೊಗ್ಗ ಲೈವ್
SHIVAMOGGA LIVE NEWS | 1 MAY 2024
BHADRAVATHI : ದಾನವಾಡಿಯಲ್ಲಿ ಎಂಪಿಎಂಗೆ ಗುತ್ತಿಗೆ ನೀಡಿರುವ ನೀಲಗಿರಿ ನೆಡುತೋಪಿನಲ್ಲಿ ಮರ ಕಡಿದ ಆರೋಪದ ಹಿನ್ನೆಲೆ 14 ಮಹಿಳೆಯರ ವಿರುದ್ಧ ಭದ್ರಾವತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಏ.26ರಂದು ಮರ ಕಡಿಯುತ್ತಿರುವ ಶಬ್ದ ಕೇಳಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಹೋದಾಗ ಮಹಿಳೆಯರು ಅಕ್ರಮವಾಗಿ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಮಹಿಳೆಯರು ಮರ ಕಡಿತಲೆ ಮಾಡಿದ್ದರಿಂದ ಸರ್ಕಾರಕ್ಕೆ 50 ಸಾವಿರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಅನುಮತಿ ಪಡೆದು, ಮಹಿಳೆಯರ ವಿರುದ್ಧ ಸಹಾಯಕ ಅರಣ್ಯಾಧಿಕಾರಿ ಕೃಷ್ಣ ಹನುಮಂತಪ್ಪ ಸಾರಥಿ ಎಂಬುವವರು ದೂರು ನೀಡಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಷ್ಟೊತ್ತಿಗೆ ಬರ್ತಾರೆ? ಎಲ್ಲಿಗೆಲ್ಲ ಭೇಟಿ ನೀಡ್ತಾರೆ?