ನಿಲ್ದಾಣದ ಗೇಟ್‌ನಲ್ಲೆ ಮಹಿಳೆ ಕಾಲ ಮೇಲೆ ಹತ್ತಿದ KSRTC ಬಸ್‌, CCTVಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 01 MARCH 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್ಸು ಆಕೆಯ ಕಾಲಿನ ಮೇಲೆ ಹರಿದಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಘಟನೆ ಸಂಭವಿಸಿದೆ. ಪಟ್ಟಣದ ನಿವಾಸಿ ಚಂದ್ರಾಬಾಯಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಲ್ದಾಣದ ಗೇಟ್‌ನಲ್ಲಿ ಚಂದ್ರಾಬಾಯಿ ನಡೆದು ಹೋಗುತ್ತಿದ್ದಾಗ ಏಕಾಎಕಿ ಬಂದ ಬಸ್‌ ಆಕೆಗೆ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂದಿನ ಚಕ್ರ ಚಂದ್ರಬಾಯಿ ಕಾಲಿನ ಮೇಲೆ ಹತ್ತಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಕೂಡಲೆ ಚಂದ್ರಾಬಾಯಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭದ್ರಾವತಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೋಟಕ್ಕೆ ಪಲ್ಟಿ ಹೊಡೆದ ಲಾರಿ

Canter Lorry at Bhadravathi channagiri road

BHADRAVATHI : ತಾಲೂಕಿನ ಚನ್ನಗಿರಿ ಮುಖ್ಯ ರಸ್ತೆಯ ಕಾಗೆಹಳ್ಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಅಪಘಾತಕ್ಕೀಡಾಗಿದೆ. ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ತೋಟಕ್ಕೆ ಉರುಳಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಆತನಿಗೆ ಸಾರ್ವಜಿನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ – ಪುಟ್ಟ ಪುಟ್ಟ ಮಕ್ಕಳ ಹೊತ್ತು, ರಣ ಬಿಸಿಲಿನಲ್ಲಿ 20 ಕಿ.ಮೀ ನಡೆದು ಹೋರಾಟ, ರೈತರ ಆಕ್ರೋಶಕ್ಕೆ ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment