ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 JUNE 2024
BHADRAVATHI : ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಭೇಟಿ ನೀಡಿದ್ದರು. ವಿವಿಧ ಘಟಕಗಳಿಗೆ ತೆರಳಿ ಪರಿಶೀಲಿಸಿದರು. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಕಾರ್ಖಾನೆಗೆ ಭೇಟಿ, ಪರಿಶೀಲನೆ
ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಲಾರ್ಪಣೆ ಮಾಡಿದರು. ಬಳಿಕ ಕಾರ್ಖಾನೆಯ ಪ್ರೈಮರಿ ಮಿಲ್, ಸ್ಟೀಲ್ ಮೇಕಿಂಗ್ ವಿಭಾಗ, ಫೋರ್ಜ್ ವಿಭಾಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದರು. ಇದೇ ವೇಳೆ ಕಾರ್ಮಿಕರಿಂದಲು ಮಾಹಿತಿ ಪಡೆದರು.

ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್
ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿಯ ಬಳಿಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಐಎಸ್‌ಎಲ್ ಆಡಳಿತ ಮಂಡಳಿ ಜೊತೆಗೆ ಸಭೆ ನಡೆಸಿದರು. ಕಾರ್ಖಾನೆ ಪುನಶ್ಚೇತನ ಸಂಬಂಧ ಮಹತ್ವ ಚರ್ಚೆ ನಡೆಯಿತು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಶಾರದಾ ಪೂರ್ಯಾನಾಯ್ಕ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು ಹಾಕಿದ ಚನ್ನಸಬಪ್ಪ, ಕಾರಣವೇನು?
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





