ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ ಭೇಟಿ ನೀಡಿತ್ತು. ವಿವಿಧ ವಿಭಾಗಕ್ಕೆ ತೆರಳಿದ ಅಧಿಕಾರಿಗಳು ವಸ್ತುಸ್ಥಿತಿಯನ್ನು ವರದಿ ಮಾಡಿಕೊಂಡಿದ್ದಾರೆ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಾರ್ಖಾನೆ ಪುನಶ್ಚೇತನಕ್ಕೆ ಹಣ ಹೂಡಿಕೆ ಮಾಡುವುದಾಗಿ ತಿಳಿಸಿದ ಬಳಿಕ ಅಧಿಕಾರಿಗಳ ಭೇಟಿ ಅತ್ಯಂತ ಮಹತ್ವ ಪಡೆದಿದೆ.
ಉಕ್ಕು ಪ್ರಾಧಿಕಾರಿದ ಅಧ್ಯಕ್ಷ ಅಮರೇಂದು ಪ್ರಕಾಶ್, ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪಾಂಡ್ರಿಕ್, ಜಂಟಿ ಕಾರ್ಯದರ್ಶಿ ಅಭಿಜಿತ್ ನರೇಂದ್ರ ಅವರ ನಿಯೋಗ ವಿಐಎಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿದ್ದರು.
ಎಲ್ಲೆಲ್ಲಿಗೆ ಭೇಟಿ ನೀಡಿತು ನಿಯೋಗ?
- ಇಂದು ಬೆಳಗ್ಗೆ ವಿಮಾನದಲ್ಲಿ ಕೇಂದ್ರದ ನಿಯೋಗ ಶಿವಮೊಗ್ಗಕ್ಕೆ ಆಗಮಿಸಿತು. ಅಲ್ಲಿಂದ ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿತು.
- ಕಾರ್ಖಾನೆ ಆವರಣದಲ್ಲಿರುವ ಸರ್. ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
- ಕಾರ್ಖಾನೆಯ ಪ್ರೈಮರಿ ಮಿಲ್, ಎಸ್‌ಎಂಎಸ್ ಮಿಲ್, ಫೋರ್ಜ್ ಪ್ಲಾಂಟ್, ಬ್ಲಾಸ್ಟ್ ಫರ್ನೇಸ್ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
- ಪ್ರತಿ ವಿಭಾಗಕ್ಕೆ ಭೇಟಿ ನೀಡಿದಾಗಲು ವಿಐಎಸ್‌ಎಲ್ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಾಂದ್ವಾನಿ, ಮುಖ್ಯ ಮಹಾಪ್ರಬಂಧಕ ಸುರೇಶ್ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ನಿಯೋಗ ಮಾಹಿತಿ ಪಡೆಯುತ್ತಿತ್ತು.
- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿ ಕೇಂದ್ರದ ಹಿರಿಯ ಅಧಿಕಾರಿಗಳು ಸಸಿಗಳನ್ನು ನೆಟ್ಟರು.
ನಿಯೋಗಕ್ಕೆ ಕಾರ್ಮಿಕರ ಮನವಿ
ಕಾರ್ಖಾನೆ ಭೇಟಿ ವೇಳೆ ಕಾರ್ಮಿಕರು, ಗುತ್ತಿಗೆ ಕಾರ್ಮಿಕರನ್ನು ಕೇಂದ್ರದ ಅಧಿಕಾರಿಗಳ ನಿಯೋಗ ಭೇಟಿ ನೀಡಿ, ಮನವಿ ಸಲ್ಲಿಸಿತು.
‘ಹಲವು ವರ್ಷದಿಂದ ಕಾರ್ಖಾನೆ ಸಂಕಷ್ಟದಲ್ಲಿದೆ. ಇದರಿಂದ ಗುತ್ತಿಗೆ ಕಾರ್ಮಿಕರಿಗೆ ತಿಂಗಳು ಪೂರ್ತಿ ಕೆಲಸ ಸಿಗುತ್ತಿಲ್ಲ. ಆದ್ದರಿಂದ ಶೀಘ್ರ ಬಂಡಾವಳ ಹೂಡಿಕೆ ಮಾಡಿ, ಕಾರ್ಮಿಕರ ಹಿತ ಕಾಯಬೇಕು’ ಎಂದು ಗುತ್ತಿಗೆ ಕಾರ್ಮಿಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಸೇರಿದಂತೆ ಹಲವರು ಇದ್ದರು.
ಇದೇ ವೇಳೆ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಶಿವಕುಮಾರ್ ಅವರು ಕೇಂದ್ರದ ಅಧಿಕಾರಿಗಳನ್ನ ಭೇಟಿಯಾಗಿ ಸನ್ಮಾನಿಸಿದರು.
ಕಾರ್ಮಿಕರಲ್ಲಿ ಆಶಾಭಾವ
ವಿಐಎಸ್‌ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ. 8 ರಿಂದ 10 ಸಾವಿರ ಕೋಟಿ ರೂ. ಹೂಡಿಕೆ ಮಾಡಲೂ ಯೋಜಿಸಲಾಗಿದೆ ಎಂದು ಮೇ 23ರಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದರು. ಇದರ ಬೆನ್ನಿಗೆ ಕೇಂದ್ರ ಉಕ್ಕು ಖಾತೆಯ ಹಿರಿಯ ಅಧಿಕಾರಿಗಳ ನಿಯೋಗ ಕಾರ್ಖಾನೆಗೆ ಭೇಟಿ ನೀಡಿರುವುದು ವಿಐಎಸ್‌ಎಲ್ ಕಾರ್ಖಾನೆ ಕಾರ್ಮಿಕರಲ್ಲಿ ಆಶಾಭಾವ ಮೂಡಿಸಿದೆ. ಅಲ್ಲದೆ ಭದ್ರಾವತಿ ಜನರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ » ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟಿ ಕೋಟಿ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200