SHIVAMOGGA LIVE NEWS | 21 AUGUST 2023
HOLEHONNURU : ಮಹಾತ್ಮ ಗಾಂಧಿ ಪ್ರತಿಮೆ (Gandhi Statue) ಧ್ವಂಸಗೊಳಿಸಿದ (Vandalized) ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಕೃತ್ಯದ ಹಿಂದಿರುವವರನ್ನು ಕಠಿಣ ಶಿಕ್ಷೆಗೆ ಒಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಿಎಂ ಟ್ವೀಟ್ನಲ್ಲಿ ಏನಿದೆ?
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.
ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ – ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200