ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ನಿಧನರಾದ ವಿಚಾರ ತಿಳಿಯುತ್ತಿದ್ದಂತೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು, ಭದ್ರಾವತಿ ಜನರು ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ. ಅಪ್ಪಾಜಿಗೌಡ ಅವರ ಮನೆ ಬಳಿ ಬ್ಯಾರಿಕೇಡ್ಗಳನ್ನು ಅಳವಡಿಸಿ, ಜನರನ್ನು ಸರತಿ ಸಾಲಿನಲ್ಲಿ ಬಿಡಲಾಗುತ್ತಿದೆ.
ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿ
ಬೆಳಗ್ಗೆ 10.30ರವರೆಗೆ ಅಪ್ಪಾಜಿಗೌಡ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ನಡೆಯಲಿದೆ. ಆ ಬಳಿಕ ಗೋಣಿಬೀಡುವರೆಗೆ ಮೆರವಣಿಗೆ ನಡೆಯಲಿದೆ. ಗೋಣಿಬೀಡಿನಲ್ಲಿ ಅಪ್ಪಾಜಿಗೌಡ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಿಎಂ ಯಡಿಯೂರಪ್ಪ ಸಂತಾಪ
ಅಪ್ಪಾಜಿಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಅವರ ಸಂತಾಪ ಸಂದೇವನ್ನು ಪ್ರಕಟಿಸಲಾಗಿದೆ.
‘ಭದ್ರಾವತಿಯ ಮಾಜಿ ಶಾಸಕ ಶ್ರೀ ಅಪ್ಪಾಜಿಗೌಡ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಕ್ಷೇತ್ರದ ಕಾರ್ಮಿಕರ ಹಿತರಕ್ಷಣೆಗೆ ಅವರ ಪರಿಶ್ರಮವನ್ನು ಮರೆಯಲಾಗದು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ.’ ಎಂದು ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಕಂಬನಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಪ್ಪಾಜಿಗೌಡ ಅವರ ನಿಧನದ ವಿಚಾರ ತಿಳಿದು ಕಂಬನಿ ಮಿಡಿದಿದ್ದಾರೆ.
‘ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ. ಅಪ್ಪಾಜಿ (ಅಪ್ಪಾಜಿ ಗೌಡ್ರು) ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದು:ಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಉಕ್ಕಿನ ನಗರಿ ಭದ್ರಾವತಿಯ ಕಾರ್ಖಾನೆ ಕಾರ್ಮಿಕರ ಧ್ವನಿಯಾಗಿ ರಾಜಕೀಯ ಪ್ರವೇಶಿಸಿದ ಅಪ್ಪಾಜಿ ಗೌಡರ ನಿಧನ ಈ ನಾಡಿಗೆ ಮತ್ತು ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.’ ಎಂದು ಕುಮಾರಸ್ವಾಮಿ ಅವರು ಸಂತಾಪ ಸಂದೇಶ ಪ್ರಕಟಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com






