ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2022
ಶಿವಮೊಗ್ಗ : ಹಿಂದೂ ಸಂಘಟನೆಗಳ ತೀವ್ರ ವಿರೋಧದ ಹಿನ್ನೆಲೆ ಮುಸ್ಲಿಂ ಹೆಣ್ಣು ಮಕ್ಕಳಿಗೆ (Muslim Ladies College) ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರದಿಂದ ಸರ್ಕಾರ ಹಿಂದೆ ಸರಿದಿದೆ. ಈ ಕುರಿತು ಭದ್ರಾವತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ.
‘ಸರ್ಕಾರದ ಮುಂದೆ ಯಾವುದೆ ಪ್ರಸ್ತಾವನೆ ಇಲ್ಲ. ಸಚಿವರು ಕೂಡ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಯಾರು ಹೇಳಿಕೆ ನೀಡಿದ್ದಾರೆಯೋ ಅವರನ್ನು ಕರೆಯಿಸಿ ಮಾತನಾಡುತ್ತೇನೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಹಿಜಾಬ್ ವಿವಾದದ ಬಳಿಕ ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಕ್ಕಳು ಕಾಲೇಜುಗಳಿಗೆ ಬರುವುದು ಕಡಿಮೆಯಾಗಿದೆ ಎಂಬ ಆರೋಪವಿದೆ ಎಂದು ಪತ್ರಕರ್ತರು ಪ್ರಶ್ನಿಸಿದರು. ‘ಕೆಲವು ಭಾಗದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಳವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಕ್ಕಳು ಆಸಕ್ತಿಯಿಂದ ವಿದ್ಯಭ್ಯಾಸ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.
(Muslim Ladies College)
ಹಿಂದೂ ಸಂಘಟನೆಗಳ ಆಕ್ರೋಶ
ಶಿವಮೊಗ್ಗ ಸೇರಿದಂತೆ ರಾಜ್ಯದ 10 ಕಡೆ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ವಕ್ಫ್ ಬೋರ್ಡ್ ಮೂಲಕ ಕಾಲೇಜು ನಡೆಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ವರದಿಯಾಗಿತ್ತು. ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸೇರಿದಂತೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.
ALSO READ – ನಗರಸಭೆಯಲ್ಲಿ ರಾದ್ಧಾಂತ, ಸಾಗರದಲ್ಲಿ ನೀರು ಪೂರೈಕೆ, ಕಸ ಸಂಗ್ರಹ ಸ್ಥಗಿತ, ಈತನಕ ಏನೇನೆಲ್ಲ ಆಗಿದೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422