Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭದ್ರಾವತಿ VISL ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಪತ್ರ, 5 ಪ್ರಮುಖಾಂಶ ಪ್ರಸ್ತಾಪ, ಏನದು?

ಭದ್ರಾವತಿ VISL ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಪತ್ರ, 5 ಪ್ರಮುಖಾಂಶ ಪ್ರಸ್ತಾಪ, ಏನದು?

30/07/2023 6:27 PM
ನಿತಿನ್‌ ಕೈದೊಟ್ಲು

SHIVAMOGGA LIVE | 30 JULY 2023

BHADRAVATHI : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್‌) ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪುನರ್‌ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮನವಿ ಮಾಡಿದ್ದಾರೆ (Letter).

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಜು.27ರಂದು ಬರೆದಿರುವ ಪತ್ರದಲ್ಲಿ (Letter) ವಿಐಎಸ್‌ಎಲ್‌ ಕಾರ್ಖಾನೆ ಪುನಾರಂಭದ ಕುರಿತು ಕೇಂದ್ರ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದಾರೆ.

CM-Siddaramaiah-drafts-letter-to-Steel-Minister-about-VISL

ಸಿಎಂ ಪತ್ರದಲ್ಲಿರುವ ಪ್ರಮುಖ 5 ಪಾಯಿಂಟ್‌

POINT 1 jpgಕರ್ನಾಟಕ ಸರ್ಕಾರದ ಅಧೀನದಲ್ಲಿದ್ದ ವಿಐಎಸ್‌ಎಲ್‌ ಕಾರ್ಖಾನೆಯನ್ನು ಆಧುನೀಕರಣದ ಉದ್ದೇಶದಿಂದ 1989ರಲ್ಲಿ ಭಾರತ ಸರ್ಕಾರಕ್ಕೆ ಒಪ್ಪಿಸಲಾಯಿತು. ಸರ್.‌ ಎಂ.ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಕಾರ್ಖಾನೆ ಇದಾಗಿದೆ. ಕೆಮ್ಮಣ್ಣುಗುಂಡಿ ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಒಳಪಟ್ಟಿದ್ದರಿಂದ ಗಣಿಗಾರಿಕೆ ನಿಷೇಧಿಸಲಾಯಿತು. ಅಂದಿನಿಂದ ವಿಐಎಸ್‌ಎಲ್‌ ಕಾರ್ಖಾನೆಗೆ ಅದಿರು ಪೂರೈಕೆ ಸ್ಥಗಿತಗೊಂಡಿದೆ.

PARISHRAMA NEET ACADEMY

POINT 2 jpg2015 ರಿಂದ 2018ರವರೆಗೆ ಕೇಂದ್ರ ಉಕ್ಕು ಸಚಿವರು ಮೂರು ಬಾರಿ ವಿಐಎಸ್‌ಎಲ್‌ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ರಾಜ್ಯ ಸರ್ಕಾರ ವಿಐಎಸ್‌ಎಲ್‌ಗೆ ಗಣಿ ಮಂಜೂರು ಮಾಡಿದರೆ, ಕಾರ್ಖಾನೆಯ ಅಧುನೀಕರಣಕ್ಕೆ 1000 ಕೋಟಿ ರೂ.ನಿಂದ 5000 ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದ್ದರು.

ಇದನ್ನೂ ಓದಿ – ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ

POINT 3 jpg2017ರಲ್ಲಿ ಅಂದಿನ ರಾಜ್ಯ ಸರ್ಕಾರ ವಿಐಎಸ್‌ಎಲ್‌ಗೆ ಸಂಡೂರು ತಾಲೂಕಿನ ರಾಮದುರ್ಗದಲ್ಲಿ 150 ಎಕರೆ ಗಣಿ ಮಂಜೂರು ಮಾಡಿದೆ. ಅಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, 2024ರಲ್ಲಿ ಅದಿರು ಪೂರೈಕೆ ಆರಂಭವಾಗಲಿದೆ.

POINT 4 jpgವಿಐಎಸ್‌ಎಲ್‌ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ತನ್ನ ಮಾತು ಉಳಿಸಿಕೊಂಡಿದೆ. ಆದರೆ ಕೇಂದ್ರ ಸರ್ಕಾರ 2018ರಲ್ಲಿ ವಿಐಎಸ್‌ಎಲ್‌ ಕಾರ್ಖಾನೆ ಖಾಸಗೀಕರಣಕ್ಕೆ ಮುಂದಾಯಿತು. ಆದರೆ ಈತನಕ ಖಾಸಗಿಯವರು ಆಸಕ್ತಿ ತೋರಿಸದ ಹಿನ್ನೆಲೆ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದೆ.

POINT 5 jpgಕೇಂದ್ರ ಸರ್ಕಾರದ ನಿರ್ಧಾರಿಂದ ಭದ್ರಾವತಿಯ ಆರ್ಥಿಕತೆಗೆ ಕೊನೆಯ ಮೊಳೆ ಹೊಡೆದಂತಾಗುತ್ತದೆ. ಅಲ್ಲದೆ ಸರ್‌ ಎಂ.ವಿಶ್ವೇಶ್ವರಯ್ಯ ಅವರ ಕಲ್ಪನೆಯ ಕರ್ನಾಟಕದ ಭವ್ಯ ಪರಂಪರೆಗು ಪೆಟ್ಟು ಬೀಳಲಿದೆ. ಕೇಂದ್ರ ಸರ್ಕಾರ ಕಾರ್ಖಾನೆ ಕುರಿತ ತನ್ನ ನಿರ್ಧಾರವನ್ನು ಪುನರ್‌ ಪರಿಶೀಲಿಸುವುದು ಉತ್ತಮ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Sagara Police Station Building ವಿಷ ಸೇವಿಸಿ ಅಸ್ವಸ್ಥನಾಗಿದ್ದ ಸಾಗರದ ಯುವಕ ಸಾವು
Next Article BY-Raghavendra-visit-Sharth-house-at-Bhadravathi ಜಲಪಾತದ ಬಳಿ ಶರತ್‌ ಮೃತದೇಹ ಪತ್ತೆ, ಮನೆಗೆ ಬಂದ ಸಂಸದ ರಾಘವೇಂದ್ರಗೆ ಕುಟುಂಬದಿಂದ ‘ಒಂದು ಮನವಿʼ

ಇದನ್ನೂ ಓದಿ

VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
railway-track-general-image.webp
BHADRAVATHI

ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಪತ್ತೆಯಾಗದ ಗುರುತು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Crime-News-General-Image
BHADRAVATHISHIVAMOGGA

ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Hundi-theft-at-Sri-Shaneshwara-temple-at-bhadravathi
BHADRAVATHI

ದೇವಸ್ಥಾನದ ಗ್ರಿಲ್‌ ಮುರಿದು, ಹುಂಡಿ ಒಡೆದು ಕಾಣಿಕೆ ಕಳವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Steel-Ministry-Officials-visit-VISL-at-Bhadravathi
BHADRAVATHI

ಭದ್ರಾವತಿ VISLಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ, ಎಲ್ಲೆಲ್ಲಿ ಭೇಟಿ ನೀಡಿದರು? ಯಾರನ್ನೆಲ್ಲ ಭೇಟಿಯಾದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/06/2025
Bhadravathi-Lakshmi-Narasimha-temple-cleaning.
BHADRAVATHI

ಭದ್ರಾವತಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ, ಗೋಪುರದ ಮೇಲೆ ಬೆಳೆದಿದ್ದ ಅರಳಿ ಗಿಡಗಳು ಕಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?