ಜೇಡಿಕಟ್ಟೆ ಬಳಿ ಟೈರ್‌ ಅಂಗಡಿಗೆ ನುಗ್ಗಿದ ಖಾಸಗಿ ಕಾಲೇಜು ಬಸ್‌, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಭದ್ರಾವತಿ: ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಕಾಲೇಜು ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟೈಯರ್ ಅಂಗಡಿಗೆ ನುಗ್ಗಿರುವ ಘಟನೆ ತಾಲ್ಲೂಕಿನ ಜೆಡಿಕಟ್ಟೆಯಲ್ಲಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜಿನ ಬಸ್ ಜೆಡಿಕಟ್ಟೆ ಬಳಿ ಬರುತ್ತಿದ್ದಂತೆ ಎದುರಿನಿಂದ ವೇಗವಾಗಿ ಬಂದ ಲಾರಿಗೆ ಮುಖಾಮುಖಿ ಡಿಕ್ಕಿಯಾಗುವ ಸಾಧ್ಯತೆ ಇತ್ತು. ಇದನ್ನು ತಪ್ಪಿಸಲು ಚಾಲಕ ಬಸ್ಸನ್ನು ಎಡಕ್ಕೆ ತಿರುಗಿಸಿದಾಗ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಇದ್ದ ಟೈಯರ್ ಅಂಗಡಿಗೆ ನುಗ್ಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ಜಖಂಗೊಂಡಿದೆ.

College-Bus-hits-a-Puncture-Shop-near-Jedikatte-in-Bhadravathi.

ಬಸ್ಸಿನಲ್ಲಿದ್ದ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು,‌ ಟೈರ್‌ ಅಂಗಡಿಗೆ ಹಾನಿಯಾಗಿದೆ. ಬಾಗಿಲಿನ ಭಾಗ ಜಖಂಗೊಂಡಿದೆ. ಈ ಸಂಬಂಧ ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.