ಶಿವಮೊಗ್ಗ ಲೈವ್
ಭದ್ರಾವತಿ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲ್ಲೂಕಿನ ದೇವರಹಳ್ಳಿ ಕೆರೆಯಲ್ಲಿ ಘಟನೆ ನಡೆದಿದೆ.
ಮೃತನನ್ನು ರಾಕೇಶ್ (20) ಎಂದು ಗುರುತಿಸಲಾಗಿದೆ. ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಹೇಗಾಯ್ತು ಘಟನೆ?
ಭದ್ರಾವತಿಯ ರಂಗನಾಥಪುರದಿಂದ ಗಣೇಶ ವಿಸರ್ಜನಾ ಮೆರವಣಿಗೆ ನಡೆಸಲಾಯಿತು. ತಡರಾತ್ರಿ 1 ಗಂಟೆ ಹೊತ್ತಿಗೆ ದೇವರಹಳ್ಳಿ ಕೆರೆಯ ಬಳಿಗೆ ತಲುಪಿತ್ತು. ವಿಸರ್ಜನೆ ಸಂದರ್ಭ ಕೆರೆಗೆ ಇಳಿದಿದ್ದ ರಾಕೇಶ್ ನಾಪತ್ತೆಯಾಗಿದ್ದರು. ರಾತ್ರಿಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದರು. ಇಂದು ಬೆಳಿಗ್ಗೆ ರಾಕೇಶ್ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.