ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BHADRAVATHI : ಹಿಂದು ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳನ್ನು ಅವಮಾನಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರ ಪುತ್ರ, ಸಚಿವ ಉದಯನಿಧಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರಳಿಹಳ್ಳಿ ದೇವರಾಜ್ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಉದಯನಿಧಿ ಸ್ಟಾಲಿನ್ ಸೆ.2ರಂದು ಹಿಂದು ಸನಾತನ ಧರ್ಮ ಡೆಂಘ ಇದ್ದಂತೆ. ಅದನ್ನು ವಿರೋಧಿಸಿದರೆ ಸಾಲದು, ಅದನ್ನು ಡೆಂಘ ಸೊಳ್ಳೆಗಳು, ಜ್ವರ, ಮಲೇರಿಯಾ, ಕರೊನಾ ನಿರ್ಮೂಲನೆ ಮಾಡಿದಂತೆ ಮಾಡಬೇಕೆಂದು ಉದ್ದೇಶಪೂರ್ವಕವಾಗಿ ದ್ವೇಷಪೂರಿತ ಮಾತುಗಳನ್ನಾಡಿದ್ದಾರೆ. ಹಿಂದು ಧಾರ್ಮಿಕ ಭಾವನೆ ಮತ್ತು ನಂಬಿಕೆಗಳನ್ನು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಇದನ್ನೂ ಓದಿ – ಆರು ವರ್ಷದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ, ಮನೆಯಿಂದ ಹೊರಬರಲು ಗ್ರಾಮಸ್ಥರಿಗೆ ಭೀತಿ
ಧರ್ಮ, ಜನಾಂಗ, ನಂಬಿಕೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವ ಹಾಗೂ ಸಾಮರಸ್ಯ ಕದಡುವ ರೀತಿ ಪೂರ್ವಗ್ರಹಪೀಡಿತ ಮಾತುಗಳನ್ನಾಡಿದ್ದಾರೆ. ಇದರಿಂದ ಹಿಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದು ಉದಯನಿಧಿ ಸ್ಟಾಲಿನ್ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಠಾಣಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.