ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 MAY 2021
ಭದ್ರಾವತಿ ತಾಲೂಕಿನಲ್ಲಿ ಕರೋನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಆತಂಕ ಹೆಚ್ಚಿಸಿದೆ. ಲಾಕ್ ಡೌನ್ ಅವಧಿ ಮುಗಿಯುತ್ತಿದ್ದರೂ ಸೋಂಕಿತರ ಸಂಖ್ಯೆ ಇಳಿಕೆಯಾಗದಿರುವುದು ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ.
ಗುರುವಾರ ಭದ್ರಾವತಿಯಲ್ಲಿ 379 ಮಂದಿಯ ಕರೋನ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 123 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮೇ 20ರಂದು ಒಬ್ಬ ಸೋಂಕಿತ ಮೃತಪಟ್ಟಿದ್ದಾರೆ. ಇದರಿಂದ ಭದ್ರಾವತಿ ತಾಲೂಕಿನಲ್ಲಿ ಈತನಕ ಕರೋನದಿಂದ ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ | ಭದ್ರಾವತಿ ತಾಲೂಕು ಎರಡು ದಿನ ಸಂಪೂರ್ಣ ಲಾಕ್ ಡೌನ್
ಸೋಂಕು ನಿಯಂತ್ರಣಕ್ಕೆ ತರಲು ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಆಡಳಿತ ನಿರ್ಧರಿಸಿದೆ. ಅದರಂತೆ ಮೇ 22 ಮತ್ತು 23ರಂದು ತಾಲೂಕಿನಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]