ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 MAY 2021
ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಿದ್ದರೂ ಆರೋಗ್ಯ ಸಹಾಯಕರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ಭದ್ರತೆಯೂ ಲಭಿಸುತ್ತಿಲ್ಲ. ಇದೆ ಕಾರಣಕ್ಕೆ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಆರೋಗ್ಯ ಸಹಾಯಕರು ಮತ್ತು ಮೇಲ್ವಿಚಾಕರ ಸಂಘದ ವತಿಯಿಂದ ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾಲೂಕು ಅರೋಗ್ಯಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಸಂಘದ ಪ್ರಮುಖರು, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರಿಗೆ ಅಗತ್ಯ ಸೌಲಭ್ಯವನ್ನೆ ನೀಡುತ್ತಿಲ್ಲ. ಕೂಡಲೆ ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
ಆರೋಗ್ಯ ಸಹಾಯಕರ ಬೇಡಿಕೆ ಏನು?
ಕರೋನ ಸಂದರ್ಭ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ, ಕಿರಿಯ ಸಹಾಯಕರಿಗೆ ತಾರಮತ್ಯವಿಲ್ಲದೆ ರಿಸ್ಕ್ ಭತ್ಯ ನೀಡಬೇಕು. ಪ್ರತಿ ತಿಂಗಳು ವಿಳಂಬ ಮಾಡದೆ ವೇತನವನ್ನು ಬಿಡುಗಡೆ ಮಾಡಬೇಕು.
ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ಗಳನ್ನು ಸಂಪರ್ಕವಾಗಿ ಒದಗಿಸಬೇಕು. ಅಲ್ಲದೆ ಕೆಲಸದ ಒತ್ತಡ ಹೆಚ್ಚಿರುವುದರಿಂದ ಕಡ್ಡಾಯವಾಗಿ ವಾರಕ್ಕೊಂದು ರಜೆ ನೀಡಬೇಕು.
ಲಾಕ್ ಡೌನ್ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಲು ದೂರದ ಹಳ್ಳಿಗಳಿಗೆ ತೆರಳಬೇಕಾಗುತ್ತದೆ. ಈ ವೇಳೆ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು. ಎಂಎಲ್ಹೆಚ್ಪಿಗಳಿಗೆ ನೀಡುತ್ತಿರುವಂತೆ ತಮಗೂ ಎಂಟು ಸಾವಿರ ರೂ. ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಅವರು ಮನವಿ ಸ್ವೀಕರಿಸಿದರು. ಸಂಘದ ಕಾರ್ಯದರ್ಶಿ ಲೋಕೇಶ್, ಪ್ರಮುಖರಾದ ಆನಂದ್, ರೇವತಿ, ಹರೀಶ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಉಮೇಶ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]