ಕೊಟ್ಟಿಗೆಯಲ್ಲಿದ್ದ ದನಗಳಿಗೆ ರಾತ್ರಿ ಮೇವು, ನೀರು ಕೊಟ್ಟು ಬಂದಿದ್ದ ಮಾಲೀಕನಿಗೆ ಬೆಳಗ್ಗೆ 5 ಗಂಟೆಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |7 JANUARY 2023

BHADRAVATHI : ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನಗಳು (cow missing) ಕಳ್ಳತನವಾಗಿವೆ. ರಾತ್ರಿ ಕೊಟ್ಟಿಗೆಯಲ್ಲಿದ್ದ ದನಗಳಿಗೆ ಮೇವು, ನೀರು ಕೊಟ್ಟು ಬಂದಿದ್ದ ಮಾಲೀಕ, ಬೆಳಗಿದ್ದು ನೋಡಿದಾಗ ದನಗಳು ನಾಪತ್ತೆಯಾಗಿದ್ದವು.

ಇದನ್ನೂ ಓದಿ – 19 ವರ್ಷದ ಯುವಕನಿಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್

ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದಲ್ಲಿ ಶಂಕರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸೋಮವಾರ ರಾತ್ರಿ ಶಂಕರ್ ಅವರು ತಮ್ಮ ಮನೆಯ ಹಿಂಬದಿಯ ಕೊಟ್ಟಿಗೆಯಲ್ಲಿದ್ದ ದನಗಳಿಗೆ ರಾತ್ರಿ 11 ಗಂಟೆಗೆ ಮೇವು, ನೀರು ಕೊಟ್ಟು ಬಂದಿದ್ದಾರೆ. ಬೆಳಗ್ಗೆ 5 ಗಂಟೆಗೆ ಎದ್ದು ನೋಡಿದಾಗ ಕೊಟ್ಟಿಗೆಯಲ್ಲಿ ದನಗಳು (cow missing) ಇರಲಿಲ್ಲ. ಗಾಬರಿಯಿಂದ ಎಲ್ಲೆಡೆ ಹುಡುಕಾಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರು ಕಳ್ಳತನ ಕೇಸ್, ಕಾರು ಮಾಲೀಕನೆ ಅರೆಸ್ಟ್, ವಿಚಾರಣೆ ವೇಳೆ ಬಾಯಿಬಿಟ್ಟ ರೋಚಕ ಸಂಗತಿ

ಗ್ರಾಮದ ಮಂಜುನಾಥ್ ಎಂಬುವವರ ತೋಟದಲ್ಲಿ ಎರಡು ದನಗಳನ್ನು ಕಟ್ಟಿಹಾಕಲಾಗಿತ್ತು. ಉಳಿದ ಎರಡು ದನಗಳು, ಒಂದು ಕರು ನಾಪತ್ತೆಯಾಗಿದೆ. ಎಲ್ಲೆಡೆ ಹುಡುಕಾಡಿದ ಶಂಕರ್ ಅವರು ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Live News Website Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment