ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
BHADRAVATHI, 4 SEPTEMBER 2024 : ನೀರಿನ ತೊಟ್ಟಿಗೆ ಬಿದ್ದಿದ್ದ ಹಸುವೊಂದನ್ನು ಭದ್ರಾವತಿ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ (RESCUED). ಹೊಳೆಗಂಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಹಸುವೊಂದು ನೀರಿನ ತೊಟ್ಟಿಗೆ ಬಿದ್ದಿತ್ತು.
ಹೊಳೆಗಂಗೂರು ಗ್ರಾಮದಲ್ಲಿ ಮನೆ ಕಟ್ಟುತ್ತಿದ್ದು ಅದಕ್ಕಾಗಿ ಎಂಟು ಅಡಿ ಆಳದ ಸಂಪ್ ನಿರ್ಮಾಣ ಮಾಡಲಾಗಿತ್ತು. ಅದರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ಅಡಿಕೆ ದಬ್ಬೆ ಹಾಕಿ ಮುಚ್ಚಲಾಗಿತ್ತು. ಮಾಮೂಲಿಯಂತೆ ಕೊಟ್ಟಿಗೆಗೆ ಹೋಗಬೇಕಿದ್ದ ಹಸು ಅಕಸ್ಮಾತ್ ಸಂಪ್ ಮೇಲೆ ಮುಚ್ಚಿದ್ದ ಅಡಿಕೆ ದಬ್ಬೆ ಮೇಲೆ ಕಾಲಿಟ್ಟಿದ್ದು, ಸಂಪ್ಗೆ ಬಿದ್ದಿದೆ.
ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಹಸುವಿಗೆ ಬೆಲ್ಟ್ ಕಟ್ಟಿ ಜೆಸಿಬಿ ಸಹಾಯದಿಂದ ಮೇಲಕ್ಕೆ ಎತ್ತಿದ್ದಾರೆ. ಹಸುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆರೋಗ್ಯದಿಂದ ಇದೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಎಸ್ಎಸ್ಒ ಹುಲಿಯಪ್ಪ, ಸಿಬ್ಬಂದಿ ಅಶೋಕ್ ಕುಮಾರ್, ಶೇಖರ್, ಸುರೇಶ್, ರಾಜ ನಾಯಕ್ ಸೇರಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಇದನ್ನೂ ಓದಿ » GOOD MORNING ಶಿವಮೊಗ್ಗ | ಇಡೀ ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್ನಲ್ಲಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422