ಶಿವಮೊಗ್ಗ ಲೈವ್
SHIVAMOGGA LIVE NEWS | 30 NOVEMBER 2024
ಭದ್ರಾವತಿ: ಹಳೆನಗರದ ಶ್ರೀಕಾಳಿಕಾಂಬ ರಸ್ತೆಯ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಗ್ಯಾಸ್ ಸಿಲಿಂಡರ್ (Cylinder) ಸ್ಫೋಟಗೊಂಡು ದಂಪತಿ ತೀವ್ರ ಗಾಯಗೊಂಡಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಹೊಸಮನೆ ಮುಖ್ಯರಸ್ತೆಯ ಗೋಬಿ ಮಂಚೂರಿ ಅಂಗಡಿ ಮಾಲೀಕ ಕೇಶವ ಅವರು ಮನೆಯಲ್ಲಿ ಘಟನೆ ಸಂಭವಿಸಿದೆ. ಅಂಗಡಿಗೆ ಸಾಮಗ್ರಿ ತೆಗೆದುಕೊಂಡು ಹೋಗುವ ಮುನ್ನ ಮನೆಯ ಬಚ್ಚಲಿನಲ್ಲಿದ್ದ ಸಿಲಿಂಡರ್ನ್ನು ಆನ್ ಮಾಡಿದಾಗ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದೆ. ಗಾಯಗೊಂಡ ಕೇಶವ ಮತ್ತು ಅವರ ಪತ್ನಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿಯನ್ನೂ ಓದಿ
ತೋಟದಲ್ಲಿ ತೆಂಗಿನ ಕಾಯಿ ಕಳ್ಳತನ, ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ

ಘಟನೆಯಲ್ಲಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಆಮಿಸಿದ ಅಗ್ನಿಶಾಮಕದಳ ಮುಖ್ಯಾಧಿಕಾರಿ ವಸಂತ ಕುಮಾರ್ ಮತ್ತು ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಇದನ್ನೂ ಓದಿ » ಐದು ವರ್ಷದ ಬಳಿಕ ಮತ್ತೆ ಸಹ್ಯಾದ್ರಿ ಉತ್ಸವ, ಏನೆಲ್ಲ ಸ್ಪರ್ಧೆ ಇರುತ್ತೆ?