ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 JUNE 2024
BHADRAVATHI : ಹಾವೇರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಮೃತ ಪೈಕಿ ಎಮ್ಮೆ ಹಟ್ಟಿಯ ಒಂದೇ ಕುಟುಂಬದವರು (family), ವಿವಿಧೆಡೆಯ ಅವರ ಸಂಬಂಧಿಕರು ಸೇರಿದ್ದಾರೆ.
ಭದ್ರಾವತಿ, ಕಡೂರು, ಶಿವಮೊಗ್ಗದವರು
ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದವರ ಪೈಕಿ ಎಮ್ಮೆಹಟ್ಟಿ ಗ್ರಾಮದ ಆದರ್ಶ, ವಿಶಲಾಕ್ಷಮ್ಮ, ನಾಗೇಶ್, ಭಾಗ್ಯಾ, ಮಾನಸ, ಸುಭದ್ರ ಇದ್ದಾರೆ. ಶಿವಮೊಗ್ಗ ನಗರದ ಆಲ್ಕೋಳ ನಿವಾಸಿಗಳಾದ ಪರಶುರಾಮ್ ಮತ್ತು ರೂಪ ದಂಪತಿ. ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಸರ್ಕಲ್ನ ಮಂಜುಳಾ ಬಾಯಿ, ಮಂಜುಳಾ. ಕಡೂರು ತಾಲೂಕಿನ ಬೀರೂರು ನಿವಾಸಿ ಅಂಜು. ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಪುಣ್ಯ ಬಾಯಿ ಮೃತರು.

ಅಂತಿಮ ದರ್ಶನಕ್ಕೆ ವ್ಯವಸ್ಥೆ
ಒಂದೇ ಕುಟುಂಬದವರು ಅಪಘಾತದಲ್ಲಿ ಮೃತಪಟ್ಟ ವಿಚಾರ ತಿಳಿದು ಎಮ್ಮೆಹಟ್ಟಿ ಗ್ರಾಮದಲ್ಲಿ ಮೌನ ಆವರಿಸಿದೆ. ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಎಮ್ಮೆಹಟ್ಟಿ ಗ್ರಾಮದ ಶಾಲೆ ಸಮೀಪ ಅಂತಿಮ ದರ್ಶನಕ್ಕೆ ನಿರ್ಧರಿಸಲಾಗಿದೆ. ಇಲ್ಲಿನ ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿಸ್ಥಿತಿ?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















