ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 25 ಸೆಪ್ಟೆಂಬರ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿ ನಗರಸಭೆ ವತಿಯಿಂದ ಈ ಬಾರಿ ವಿಭಿನ್ನವಾಗಿ ದಸರಾ ಆಚರಿಸಲು ನಿರ್ಧರಿಸಲಾಗಿದೆ. ಒಂಭತ್ತು ದಿನ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಕೊನೆಯ ದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭವ್ಯ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭೆ ಆಯುಕ್ತ ಮನೋಹರ್, 21.5 ಲಕ್ಷ ರೂ. ವೆಚ್ಚದಲ್ಲಿ ವಿಭಿನ್ನವಾಗಿ ನವರಾತ್ರಿ ಆಚರಣೆ ಮಾಡಲಾಗುತ್ತದೆ. ಇದೆ ಮೊದಲ ಬಾರಿ ಭದ್ರಾವತಿಯಲ್ಲಿ ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದರು ತಿಳಿಸಿದರು.
ಏನೆಲ್ಲ ಕಾರ್ಯಕ್ರಮಗಳು ಇರಲಿವೆ?
ಸೆಪ್ಟಂಬರ್ 29ರಂದು ಗ್ರಾಮದೇವತೆ ಹಳದಮ್ಮ ದೇವಸ್ಥಾನದಲ್ಲಿ ಡಾ.ಕೆ.ಎಸ್.ಕುಮಾರಸ್ವಾಮಿ ಅವರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ನವರಾತ್ರಿ ಉತ್ಸವ ಆರಂಭವಾಗಲಿದೆ. ಯುವ ದಸರಾ, ಪರಿಸರ ದಸರಾ, ಯೋಗ ದಸರಾ, ಮಹಿಳಾ ದಸರಾ, ರಂಗ ದಸರಾ, ಮಕ್ಕಳ ದಸರಾ ನಡೆಯಲಿದೆ.
ಅಕ್ಟೋಬರ್ 7ರಂದು ಆಯುಧಪೂಜೆ ನೆರವೇರಲಿದೆ. ಅ.8ರಂದು ಲೋಯರ್ ಹುತ್ತಾದ ಶ್ರೀ ತಿರುಮಲ ದೇವಸ್ಥಾನದಿಂದ ನಾಡದೇವಿ ಚಾಮುಂಡೇಶ್ವರಿ ಮೆರವಣಿಗೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಶಾಸಕ ಸಂಗಮೇಶ್ವರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಆ ದಿನ ನಗರದ ವಿವಿಧ ದೇವಸ್ಥಾನಗಳ ದೇವ, ದೇವತೆಗಳ ಅಲಂಕೃತ ಉತ್ಸವ ಮೂರ್ತಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದ್ದು, ಕನಕ ಮಂಟಪ ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮವಿರುತ್ತದೆ ಎಂದು ಆಯುಕ್ತ ಮನೋಹರ್ ತಿಳಿಸಿದ್ದಾರೆ.
ನಗರಸಭೆ ಅಧಿಕಾರಿಗಳಾದ ಸುಹಾಸಿನಿ, ರಾಜ್’ಕುಮಾರ್, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]