ಸದಸ್ಯತ್ವ ಅಭಿಯಾನ, ಪಕ್ಷದ ಮುಖಂಡರಿಗೆ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 ಏಪ್ರಿಲ್ 2022

ಕೆಲವು ಕ್ಷೇತ್ರಗಳಲ್ಲಿ ಸದಸ್ಯತ್ವ ಅಭಿಯಾನ ನಿಧಾನಗತಿಯಲ್ಲಿ ನಡೆಯುತ್ತಿದೆ. ಮುಖಂಡರು ಸದಸ್ಯತ್ವ ಅಭಿಯಾನವನ್ನು ಬಿರುಸುಗೊಳಿಸಬೇಕು. ಇಲ್ಲವೇ ಮನೆಗೆ ನಡೆಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು.

ಭದ್ರಾವತಿಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ನಡೆದ ಪಕ್ಷದ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಶಿಕಾರಿಪುರ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ನಿಧಾನಗತಿಯಲ್ಲಿ ಸಾಗಿದೆ. ಶಿವಮೊಗ್ಗದಲ್ಲಿ 23 ಸಾವಿರ ಹಾಗೂ ಭದ್ರಾವತಿಯಲ್ಲಿ ಕೇವಲ 9 ಸಾವಿರ ಸದಸ್ಯತ್ವ ಮಾತ್ರ ಆಗಿದೆ. ಪ್ರತಿ ಕ್ಷೇತ್ರದಲ್ಲಿ 40 ಸಾವಿರ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಯತ್ನ ಆಗಬೇಕು ಎಂದು ಸೂಚಿಸಿದರು.

ಕಾರ್ಯಕರ್ತರು ಹಾಗೂ ಮುಖಂಡರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಮನೆ ಮನೆಗೆ ತೆರಳಿ ಬಿಜೆಪಿಯ ಭ್ರಷ್ಟ ಆಡಳಿತವನ್ನು ತಿಳಿಸುವ ಮೂಲಕ ಪಕ್ಷ ಸಂಘಟನೆ ಬಲಪಡಿಸಬೇಕು. ಗ್ರಾಮ ಪಂಚಾಯಿತಿ, ನಗರಸಭೆ ಸೇರಿದಂತೆ ಎಲ್ಲೆಡೆ ನಮ್ಮ ಪಕ್ಷದ ಮುಖಂಡರೇ ಇರುವಾಗ ಎಲ್ಲೆಡೆಯೂ ಶಾಸಕರೇ ಬರಬೇಕು ಎಂದೇನೂ ಇಲ್ಲ. ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭವೇ ಸದಸ್ಯರು. ಹೆಚ್ಚು ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿ. ಇಲ್ಲವೆ ಮನೆಗೆ ತೆರಳಿ ಎಂದು ಮುಖಂಡರಿಗೆ ಎಚ್ಚರಿಸಿದರು.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment