ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019
ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಪ್ರಚಾರಕ್ಕೆ ಬರುತ್ತಿದ್ದಂತೆ, ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
![]() |
ಭದ್ರಾವತಿ ಹೆಲಿಪ್ಯಾಡ್’ಗೆ ಬಂದಿಳಿಯುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರಬೇಕು. ವ್ಯಕ್ತಿ ನಿಷ್ಠೆಗಿಂತಲೂ ಪಕ್ಷ ನಿಷ್ಠೆ ಮುಖ್ಯ ಅಂದರು.
ನಾಳೆಯಿಂದ ಒಂದೇ ಕಾರಲ್ಲಿ ಹೋಗಬೇಕು
ತೀರ್ಥಹಳ್ಳಿ ಮತ್ತು ಭದ್ರಾವತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಡುವೆ ಸಮನ್ವಯತೆಯಿಲ್ಲ, ನಾಯಕರು ಒಟ್ಟಾಗಿ ಪ್ರಚಾರ ನಡೆಸುವುದಿಲ್ಲ ಎಂದು ಬಹಿರಂಗ ಹೇಳಿಕೆ ನೀಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷದಲ್ಲಿ ಉಳಿಯಬೇಕು ಅಂದರೆ ನಾಳೆಯಿಂದ ಒಂದೇ ಗಾಡಿಯಲ್ಲಿ ಹೋಗಬೇಕು. ಇಲ್ಲವಾದಲ್ಲಿ ಬೇರೆ ಗಾಡಿ ಹತ್ತಿಕೊಂಡು ಹೋಗಬಹುದು ಅಂತಾ ಖಡಕ್ ವಾರ್ನಿಂಗ್ ನೀಡಿದರು.
ನನ್ನ ಹೆಲಿಕಾಪ್ಟರ್ ಕೈಕೊಟ್ಟಿಲ್ಲ
ಹೆಲಿಕಾಪ್ಟರ್ ಕೈ ಕೊಟ್ಟಿದ್ದರಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ ಗೈರು ಹಾಜರಿಯನ್ನು ವ್ಯಂಗ್ಯವಾಡಿದ ಡಿ.ಕೆ.ಶಿವಕುಮಾರ್, ತಮ್ಮ ಹೆಲಿಕಾಪ್ಟರ್ ಕೈ ಕೊಟ್ಟಿಲ್ಲ. ಶುಭ ಘಳಿಗೆ, ಶುಭ ಮುಹೂರ್ತದಲ್ಲಿ ಬಂದಿದ್ದೇನೆ. ಮಧು ಬಂಗಾರಪ್ಪ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತಾ ಭರವಸೆ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200