ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್‌ ಕಾಗೋಡು ತಿಮ್ಮಪ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 22 JANUARY 2025

ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಡಿಫೆನ್ಸ್‌ ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿಯ ಪ್ರೊ. ಸಿ.ಎಸ್‌.ಉನ್ನೀಕೃಷ್ಣನ್‌, ಯೋಗ ಗುರು ಭದ್ರಾವತಿಯ ಡಿ.ನಾಗರಾಜ್‌ ಅವರಿಗೆ ಗೌರವ ಡಾಕ್ಟರೇಟ್‌ (Doctorate) ಪದವಿ ಪ್ರದಾನ ಮಾಡಲಾಯಿತು.

ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿದರು.

Honorary Doctorate at kuvempu university

ಪುತ್ರಿಯೊಂದಿಗೆ ಬಂದಿದ್ದರು ಮಾಜಿ ಮಿನಿಸ್ಟರ್‌

ಗೌರವ ಡಾಕ್ಟರೇಟ್‌ ಪದವಿ ಪಡೆಯಲು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಮ್ಮ ಪುತ್ರಿ ಡಾ. ರಾಜನಂದಿನಿ ಕಾಗೋಡು ಅವರೊಂದಿಗೆ ಆಗಮಿಸಿದ್ದರು.

Honorary Doctorate at kuvempu university for kagodu thimmappa

ಗೌರವ ಡಾಕ್ಟರೇಟ್ ಕೊಟ್ಟಿರೋದು ಸಂತೋಷ ಆಗಿದೆ. ನಮ್ಮ ನಡೆ ನುಡಿ ಗೌರವಿಸಿ ಸನ್ಮಾನ ಮಾಡಿದ್ದಾರೆ. ಅವರಿಗೆ ನಾನು ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಮೇಲೆ ವಿಶ್ವಾಸ ಇಟ್ಟು ಡಾಕ್ಟರೇಟ್ ಕೊಟ್ಟಿದ್ದಾರೆ. ಎರಡು ಡಾಕ್ಟರೇಟ್ ಕೊಟ್ಟಿದ್ದಾರೆ ನಾನೇನು ಹೇಳಲಿ.

– ಡಾ. ಕಾಗೋಡು ತಿಮ್ಮಪ್ಪ, ಮಾಜಿ ಸಚಿವ

ಸಭೀಕರೊಂದಿಗೆ ಸಚಿವ ಮಧು ಬಂಗಾರಪ್ಪ

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡುವುದನ್ನು ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆಗಮಿಸಿದ್ದರು. ಘಟಿಕೋತ್ಸವದ ಶಿಷ್ಟಾಚಾರದ ಪ್ರಕಾರ ಸಚಿವರು ವೇದಿಕೆ ಮೇಲೇರಲು ಅವಕಾಶವಿರಲಿಲ್ಲ. ಹಾಗಾಗಿ ವೇದಿಕೆ ಮುಂಭಾಗ ಸಭೀಕರೊಂದಿಗೆ ಕುಳಿತು ಘಟಿಕೋತ್ಸವ ವೀಕ್ಷಿಸಿದರು. ಘಟಿಕೋತ್ಸವದ ಬಳಿಕ ಸಚಿವ ಮಧು ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಅವರ ಕಾಲಿಗೆರಗಿ ಆಶೀರ್ವಾದ ಪಡೆದರು.

Honorary Doctorate at kuvempu university for kagodu thimmappa - madhu bangarappa

ಬಂಗಾರಪ್ಪ ಅವರು ಕುವೆಂಪು ವಿಶ್ವವಿದ್ಯಾಲಯವನ್ನು ಶುರು ಸ್ಥಾಪಿಸಿದ್ದರು. ಅದೇ ವಿಶ್ವವಿದ್ಯಾಲಯದಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್ ಸಿಗುತ್ತಿದೆ. ಒಂದೇ ದಿನ ಕಾಗೋಡು ತಿಮ್ಮಪ್ಪ ಅವರಿಗೆ ಎರಡು ಗೌರವ ಡಾಕ್ಟರೇಟ್ ಲಭಿಸಿದೆ. ಇದೊಂದು ಪುಣ್ಯ ಹಾಗೂ ಭಾಗ್ಯದ ದಿನ. ನಮ್ಮ ಮುಂದಿನ ಪೀಳಿಗೆಗೆ ಇದು ಮಾರ್ಗದರ್ಶನವಾಗಬೇಕು. ಕಾಗೋಡು ತಿಮ್ಮಪ್ಪ ಅವರೊಂದಿಗೇ ನಾನು ಮೊದಲು ಹೋರಾಟದ ಹೆಜ್ಜೆ ಹಾಕಿದ್ದು.

– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ಮಾಜಿ ಎಂಎಲ್‌ಎಯಿಂದ ಶುಭಾಶಯ

ಇಂಡಸ್ಟ್ರೀಯಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪಿಹೆಚ್‌ಡಿ ಪದವಿ ಪಡೆದ ಪುತ್ರಿ ಶ್ರೇಯಾ ಜೊತೆಗೆ ಆಗಮಿಸಿದ್ದ ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌, ಘಟಿಕೋತ್ಸವ ಸಭಾಂಗಣದ ಆವರಣದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಅಭಿನಂದನೆ ಸಲ್ಲಿಸಿದರು.

Honorary Doctorate at kuvempu university for kagodu thimmappa. K B Ashok Naik.

ಮತ್ತೊಂದು ಗೌರವ ಡಾಕ್ಟರೇಟ್‌

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವವು ಸಾಗರ ತಾಲೂಕು ಇರುವಕ್ಕಿಯ ಕ್ಯಾಂಪಸ್‌ನಲ್ಲಿ ನಡೆಯಿತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರು ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದರು.

Honorary Doctorate at for kagodu thimmappa at Keladi Shivappanayaka agriculture university

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಒಂದೇ ದಿನ ಎರಡು ವಿಶ್ವವಿದ್ಯಾಲಯಗಳಿಂದ ಎರಡು ಗೌರವ ಡಾಕ್ಟರೇಟ್‌ ಪಡೆದಿದ್ದಾರೆ.

ಇದನ್ನೂ ಓದಿ » ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 22, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment