SHIVAMOGGA LIVE NEWS, 22 JANUARY 2025
ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರೊ. ಸಿ.ಎಸ್.ಉನ್ನೀಕೃಷ್ಣನ್, ಯೋಗ ಗುರು ಭದ್ರಾವತಿಯ ಡಿ.ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ (Doctorate) ಪದವಿ ಪ್ರದಾನ ಮಾಡಲಾಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಗೌರವ ಡಾಕ್ಟರೇಟ್ ಪದವಿ ಪಡೆಯಲು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಮ್ಮ ಪುತ್ರಿ ಡಾ. ರಾಜನಂದಿನಿ ಕಾಗೋಡು ಅವರೊಂದಿಗೆ ಆಗಮಿಸಿದ್ದರು. ಗೌರವ ಡಾಕ್ಟರೇಟ್ ಕೊಟ್ಟಿರೋದು ಸಂತೋಷ ಆಗಿದೆ. ನಮ್ಮ ನಡೆ ನುಡಿ ಗೌರವಿಸಿ ಸನ್ಮಾನ ಮಾಡಿದ್ದಾರೆ. ಅವರಿಗೆ ನಾನು ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಮೇಲೆ ವಿಶ್ವಾಸ ಇಟ್ಟು ಡಾಕ್ಟರೇಟ್ ಕೊಟ್ಟಿದ್ದಾರೆ. ಎರಡು ಡಾಕ್ಟರೇಟ್ ಕೊಟ್ಟಿದ್ದಾರೆ ನಾನೇನು ಹೇಳಲಿ. – ಡಾ. ಕಾಗೋಡು ತಿಮ್ಮಪ್ಪ, ಮಾಜಿ ಸಚಿವಪುತ್ರಿಯೊಂದಿಗೆ ಬಂದಿದ್ದರು ಮಾಜಿ ಮಿನಿಸ್ಟರ್
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುವುದನ್ನು ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆಗಮಿಸಿದ್ದರು. ಘಟಿಕೋತ್ಸವದ ಶಿಷ್ಟಾಚಾರದ ಪ್ರಕಾರ ಸಚಿವರು ವೇದಿಕೆ ಮೇಲೇರಲು ಅವಕಾಶವಿರಲಿಲ್ಲ. ಹಾಗಾಗಿ ವೇದಿಕೆ ಮುಂಭಾಗ ಸಭೀಕರೊಂದಿಗೆ ಕುಳಿತು ಘಟಿಕೋತ್ಸವ ವೀಕ್ಷಿಸಿದರು. ಘಟಿಕೋತ್ಸವದ ಬಳಿಕ ಸಚಿವ ಮಧು ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಅವರ ಕಾಲಿಗೆರಗಿ ಆಶೀರ್ವಾದ ಪಡೆದರು. ಬಂಗಾರಪ್ಪ ಅವರು ಕುವೆಂಪು ವಿಶ್ವವಿದ್ಯಾಲಯವನ್ನು ಶುರು ಸ್ಥಾಪಿಸಿದ್ದರು. ಅದೇ ವಿಶ್ವವಿದ್ಯಾಲಯದಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್ ಸಿಗುತ್ತಿದೆ. ಒಂದೇ ದಿನ ಕಾಗೋಡು ತಿಮ್ಮಪ್ಪ ಅವರಿಗೆ ಎರಡು ಗೌರವ ಡಾಕ್ಟರೇಟ್ ಲಭಿಸಿದೆ. ಇದೊಂದು ಪುಣ್ಯ ಹಾಗೂ ಭಾಗ್ಯದ ದಿನ. ನಮ್ಮ ಮುಂದಿನ ಪೀಳಿಗೆಗೆ ಇದು ಮಾರ್ಗದರ್ಶನವಾಗಬೇಕು. ಕಾಗೋಡು ತಿಮ್ಮಪ್ಪ ಅವರೊಂದಿಗೇ ನಾನು ಮೊದಲು ಹೋರಾಟದ ಹೆಜ್ಜೆ ಹಾಕಿದ್ದು. – ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವಸಭೀಕರೊಂದಿಗೆ ಸಚಿವ ಮಧು ಬಂಗಾರಪ್ಪ
ಮಾಜಿ ಎಂಎಲ್‌ಎಯಿಂದ ಶುಭಾಶಯ
ಇಂಡಸ್ಟ್ರೀಯಲ್ ಕೆಮಿಸ್ಟ್ರಿ ವಿಭಾಗದಲ್ಲಿ ಪಿಹೆಚ್‌ಡಿ ಪದವಿ ಪಡೆದ ಪುತ್ರಿ ಶ್ರೇಯಾ ಜೊತೆಗೆ ಆಗಮಿಸಿದ್ದ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಘಟಿಕೋತ್ಸವ ಸಭಾಂಗಣದ ಆವರಣದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಅಭಿನಂದನೆ ಸಲ್ಲಿಸಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವವು ಸಾಗರ ತಾಲೂಕು ಇರುವಕ್ಕಿಯ ಕ್ಯಾಂಪಸ್‌ನಲ್ಲಿ ನಡೆಯಿತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.ಮತ್ತೊಂದು ಗೌರವ ಡಾಕ್ಟರೇಟ್
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಒಂದೇ ದಿನ ಎರಡು ವಿಶ್ವವಿದ್ಯಾಲಯಗಳಿಂದ ಎರಡು ಗೌರವ ಡಾಕ್ಟರೇಟ್ ಪಡೆದಿದ್ದಾರೆ.
ಇದನ್ನೂ ಓದಿ » ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?