ರಂಗನಾಥಸ್ವಾಮಿ ದೇವಸ್ಥಾನದ ಗೋಪುರ ನಿರ್ಮಾಣ, ಎಂಎಲ್‌ಎ ದೇಣಿಗೆ

 ಶಿವಮೊಗ್ಗ  LIVE 

ಭದ್ರಾವತಿ: ನಗರಸಭೆ ವ್ಯಾಪ್ತಿಯ ಹಳೇಕವಲಗುಂದಿ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ₹3 ಲಕ್ಷ ದೇಣಿಗೆ (donation) ನೀಡಿದರು.

BK-Sangameshwara-at-halekavalagundhಇ

ಗ್ರಾಮಕ್ಕೆ ಭೇಟಿ ನೀಡಿ ಗೋಪುರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು. ಶಾಸಕರ ನಿಧಿಯಿಂದ ₹3 ಲಕ್ಷ ನೆರವು ನೀಡಲಾಗಿದೆ. ಶೀಘ್ರದಲ್ಲಿಯೇ ಗೋಪುರ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆ ಆಗಲಿ ಎಂದರು. ಇನ್ನು, ಗ್ರಾಮಸ್ಥರ ಸಮಸ್ಯೆ ಆಲಿಸಿ, ಅವುಗಳನ್ನು ಬಗಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ » VISL ನಿವೃತ್ತ ಕಾರ್ಮಿಕರ ಚುನಾವಣೆ, ಯಾರೆಲ್ಲ ಸ್ಪರ್ಧಿಸಿದ್ದಾರೆ? ಯಾವಾಗ ಎಲೆಕ್ಷನ್?

ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾರಾಜ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮುರುಗನ್, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಅರ್ಚಕರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment