ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ನವೆಂಬರ್ 2021
ಭದ್ರಾವತಿಯಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಯನ್ನು ಬದಲಾಯಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈಗಿರುವ ಪ್ರತಿಮೆ ತೆರವು ಮಾಡಿ, ಹೊಸ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಡಿಎಸ್ಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ಸಂಬಂಧ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಮನವಿ ಸಲ್ಲಿಸಿದ ಡಿಎಸ್ಎಸ್ ಕಾರ್ಯಕರ್ತರು, ಅತಿ ಶೀಘ್ರದಲ್ಲಿ ಹೊಸ ಪ್ರತಿಮೆ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಬದಲಾವಣೆ ಯಾಕೆ?
ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು 2007ರಲ್ಲಿ ರೈಲ್ವೆ ಸೇತುವೆ ಮುಂದೆ ಡಾ.ಅಂಬೇಡ್ಕರ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು.
(ಆಗಿಂದಾಗ್ಗೆ ಆರೋಗ್ಯ ತಪಾಸಣೆ ಅವಶ್ಯ. ಪರಿಣಿತ ವೈದ್ಯರು, ನುರಿತ ತಜ್ಞರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)
ಈ ಪ್ರತಿಮೆಯು ಕೇವಲ 6 ಅಡಿಯಷ್ಟಿದೆ. ಇದು ಕುಬ್ಜವಾಗಿದ್ದು ಪ್ರತಿಮೆಯನ್ನು ಬದಲಾಯಿಸಬೇಕು. ಇಲ್ಲಿ 12 ಅಡಿ ಎತ್ತರದ ಆಕರ್ಷಕ ಪ್ರತಿಮೆ ಪ್ರತಿಷ್ಠಾಪಿಸಬೇಕು. ಈ ಬಗ್ಗೆ ಹಲವು ಭಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಈ ಮೂಲಕ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಡಿಎಸ್ಎಸ್ ಮುಖಂಡರು ಆರೋಪಿಸಿದರು.
‘ಹೊಸ ಪ್ರತಿಮೆ ಪ್ರತಿಷ್ಠಾಪನೆಯಾಗುತ್ತೆ’
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಬಿ.ಕೆ.ಸಂಗಮೇಶ್ವರ್, ಸರ್ಕಾರದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗುತ್ತಿಲ್ಲ. ಆದರೂ ಯಾವುದಾದರೂ ಅನುದಾನ ಹೊಂದಿಸಿ ಡಾ.ಅಂಬೇಡ್ಕರ್ ಅವರ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗುತ್ತದೆ ಎಂದು ಭರವಸೆ ನೀಡಿದರು.
(ಶಿವಮೊಗ್ಗದಲ್ಲಿ ಇದೇ ಮೊದಲು – ಲೈವ್ ಕಿಚಿನ್, ಏಳು ನಿಮಿಷದಲ್ಲಿ ರೆಡಿಯಾಗುತೆ ಕೇಕ್ – ಈಗಲೆ ಫೋನ್ ಮಾಡಿ, ನಿಮ್ಮ ಆರ್ಡರ್ ಬುಕ್ ಮಾಡಿ)

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






