ಹೊಳೆಹೊನ್ನೂರು: ತೋಟದಲ್ಲಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಆಕಸ್ಮಿಕವಾಗಿ ಸ್ಪರ್ಶಿಸಿದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಬುಳ್ಳಾಪುರದ ಬಸವರಾಜಪ್ಪ ಗೌಡ (55) ಮೃತ ರೈತ. ತಮ್ಮ ತೋಟದಲ್ಲಿ ಫೈಬರ್ ದೋಟಿ ಬಳಸಿ ತೆಂಗಿನಕಾಯಿ ಕೀಳುತ್ತಿದ್ದರು. ಈ ವೇಳೆ ತೋಟದ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ಲೈನ್‌ಗೆ ದೋಟಿ ಆಕಸ್ಮಿಕವಾಗಿ ತಗುಲಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ಬಸವರಾಜಪ್ಪ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:➤ ಮಗುವಿಗೆ ಔಷಧ ತರಲು ಬೈಕ್ನಲ್ಲಿ ಹೋಗಿದ್ದ ವ್ಯಕ್ತಿಗೆ ಟ್ರಾಕ್ಟರ್ ಡಿಕ್ಕಿ, ಗಂಭೀರ ಗಾಯ, ಹೇಗಾಯ್ತು ಘಟನೆ?