ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ನಿಯಂತ್ರಣ ತಪ್ಪಿ ಬೈಕ್ ಸಮೇತ ಚಾನಲ್ ನೀರಿಗೆ ಬಿದ್ದಿದ್ದ ವ್ಯಕ್ತಿಯನ್ನು (biker) ಇ.ಆರ್.ಎಸ್.ಎಸ್ (ERSS-112) ಸಿಬ್ಬಂದಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಕಳೆದ ರಾತ್ರಿ ಭದ್ರಾವತಿಯ ಹುತ್ತ ಕಾಲೋನಿ ಫಿಶ್ ಮಾರುಕಟ್ಟೆ ಹತ್ತಿರ ವ್ಯಕ್ತಿಯೊಬ್ಬರು ಅತೀ ವೇಗವಾಗಿ ಬೈಕ್ ಚಲಾಯಿಸುತ್ತಿದ್ದರು. ಕಾಮಗಾರಿ ನಡೆಯುತ್ತಿದ್ದ ಸೇತುವೆ ಸಮೀಪ ನಿಯಂತ್ರಣ ತಪ್ಪಿ ಚಾನಲ್ ನೀರಿಗೆ ಬಿದ್ದಿದ್ದರು. ಈ ಕುರಿತು ಮಾಹಿತಿ ತಲುಪಿದ ತಕ್ಷಣ ತುರ್ತು ಸ್ಪಂದನಾ ವಾಹನದ (ERV) ಸಿಬ್ಬಂದಿ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯ ಹೆಚ್.ಸಿ. ಮಲ್ಲಿಕಾರ್ಜುನ್ ಮತ್ತು ಚಾಲಕ ಪ್ರವೀಣ್ (ಎಪಿಸಿ) ಸ್ಥಳಕ್ಕೆ ಧಾವಿಸಿದ್ದಾರೆ.

ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ, ಸಾರ್ವಜನಿಕರ ನೆರವಿನೊಂದಿಗೆ ಮೇಲಕ್ಕೆ ಎತ್ತಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ನಂತರ ಸ್ಥಳಕ್ಕೆ ಆಂಬುಲೆನ್ಸ್ ತರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯನ್ನು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ ಅವರು ಪ್ರಶಂಸಿದ್ದಾರೆ.
ಇದನ್ನೂ ಓದಿ – ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





