ಶಿವಮೊಗ್ಗ ಲೈವ್.ಕಾಂ | BHADRAVATHI NEWS | 11 ಜುಲೈ 2020
ಕರೋನ ವಾರಿಯರ್‌ಗೆ ಸೋಂಕು ತಗುಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಅವರು ಪಿಡಿಒ ಒಬ್ಬರಿಗೆ ಸೂಚನೆ ನೀಡಿದ್ದಾರೆ. ಮೂವರ ವಿರುದ್ಧ ಪ್ರಕರಣ ದಾಖಲಾಗುವ ಸಾದ್ಯತೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಲಾಯ್ತು?
ಭದ್ರಾವತಿ ತಾಲೂಕು ಹನುಮಂತಾಪುರದ ನಿವಾಸಿ, ತಾಲೂಕು ನೇತ್ರಾಧಿಕಾರಿ ಡಾ.ರುದ್ರೇಶ್ ಅವರ ವಿರುದ್ಧ ಸುಳ್ಳು ಸುದ್ದಿ ಹಬ್ಬಸಿಲಾಗಿತ್ತು. ಡಾ.ರುದ್ರೇಶ್ ಮತ್ತು ಅವರ ಕುಟುಂಬಕ್ಕೆ ಕರೋನ ಸೋಂಕು ತಗುಲಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಇದು ಹನುಮಂತಾಪುರದ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿತ್ತು.
ಮೂವರ ವಿರುದ್ಧ ಕೇಸ್‌ಗೆ ಸೂಚನೆ
ಸುಳ್ಳು ಸುದ್ದಿಯಿಂದ ಮನನೊಂದ ಡಾ.ರುದ್ರೇಶ್ ಅವರು ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ಈ ಸಂಬಂಧ ದೂರು ನೀಡಿದ್ದಾರೆ. ಅನಗತ್ಯ ಗೊಂದಲ ಉಂಟು ಮಾಡಿದ ಹಿನ್ನೆಲೆ, ಸುಳ್ಳು ಸುದ್ದಿ ಹಬ್ಬಿಸಿದ ಅದೇ ಗ್ರಾಮದ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ, ಜಿಲ್ಲಾ ಆರೋಗ್ಯಾಧಿಕಾರಿ ಅವರು ಪಿಡಿಓಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಡಾ.ರುದ್ರೇಶ್ ಮತ್ತು ಅವರ ಕುಟುಂಬಕ್ಕೆ ಸೋಂಕು ತಗುಲಿಲ್ಲ ಎಂದೂ ದೃಢಪಡಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]