ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು (family members) ನಾಪತ್ತೆಯಾಗಿದ್ದಾರೆ. ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ಘಟನೆ ಸಂಭವಿಸಿದೆ. ನೀಲಾಬಾಯಿ, ಅವರ ಮಗ ರವಿಕುಮಾರ್, ಮಗಳು ಶ್ವೇತಾ, ಅಳಿಯ ಪರಶುರಾಮ್ ನಾಪತ್ತೆಯಾಗಿದ್ದಾರೆ.

ಹೇಗಾಯ್ತು ಘಟನೆ?
ಭದ್ರಾ ಎಡದಂಡೆ ನಾಲೆಯಲ್ಲಿ ಬಟ್ಟೆ ಒಗೆಲು ಬಂದಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ನಾಲೆಗೆ ಜಾರಿ ಒಬ್ಬರ ರಕ್ಷಣೆಗೆ ಮತ್ತೊಬ್ಬರು ಅವರ ಹಿಂದೆ ಇನ್ನೊಬ್ಬರು ಎಂಬಂತೆ ನಾಲೆಗೆ ಇಳಿದಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ನಾಲ್ವರ ಶೋಧ ಕಾರ್ಯ ನಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಜಾತ್ರೆ ಹಿನ್ನೆಲೆ ಅಳಿಯ ಪರಶುರಾಮ್ ಅವರು ಮಾವನ ಮನೆಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇದನ್ನು ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





