ಶಿವಮೊಗ್ಗ ಬಳಿ ಕಾರು ಪಲ್ಟಿ, ಬೆಂಗಳೂರಿನ ನಾಲ್ವರಿಗೆ ಗಾಯ, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಹೊಳೆಹೊನ್ನೂರು: ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಕೆರೆಬೀರನಹಳ್ಳಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ (ಸಣ್ಣ ಸೇತುವೆ) ತಗುಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೆಂಗಳೂರು ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಕೆರೆಬೀರನಹಳ್ಳಿ ಗ್ರಾಮದ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

Car-accident-near-kerebeeranahalli-in-Shimoga-Chitradurga-highway

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಬಂದು ಗಾಯಾಳುಗಳಿಗೆ ನೆರವಾಗಿದ್ದಾರೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!