| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಭದ್ರಾವತಿ: ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ ಎರಡು ಪಾದಗಳು (Feet) ಅರ್ಧಕ್ಕೆ ಮುರಿದಿವೆ. ಯಡೇಹಳ್ಳಿ ಮತ್ತು ಕೈಮರ ಗ್ರಾಮಗಳ ಮಧ್ಯದ ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.
ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಿಪ್ಪೇರುದ್ರಸ್ವಾಮಿ ಎಂಬುವವರನ್ನು ಅಶೋಕ ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಹೇಗಾಯ್ತು ಘಟನೆ?
![]()
ತಿಪ್ಪೇರುದ್ರಸ್ವಾಮಿ ಅವರು ಕೈಮರ ಸರ್ಕಲ್‌ನಲ್ಲಿರುವ ಅಂಗಡಿಯಲ್ಲಿ ಟೀ ಕುಡಿಯಲು ಬೈಕ್ ನಿಲ್ಲಿಸಿದ್ದರು. ಮೂತ್ರ ವಿಸರ್ಜನೆಗೆಂದು ರೆಸ್ತೆ ದಾಟಿ ಹೋಗಿದ್ದರು. ಟೀ ಅಂಗಡಿ ಬಳಿ ಮರಳಿ ಬರುವಾಗ ಶಿವಮೊಗ್ಗದಿಂದ ಚನ್ನಗಿರಿ ಕಡೆಗೆ ತೆರಳುತ್ತಿದ್ದ ವಾಹನ ತಿಪ್ಪೇರುದ್ರಸ್ವಾಮಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ಯಡೇಹಳ್ಳಿಯಲ್ಲಿ ಅಪಘಾತ, ತೀವ್ರ ಗಾಯಗೊಂಡಿದ್ದ ಯುವಕ ಸಾವು, ಮಾನವೀಯತೆ ಮೆರೆದ ಪೋಷಕರು
ಘಟನೆಯಲ್ಲಿ ತಿಪ್ಪೇರುದ್ರಸ್ವಾಮಿ ಅವರ ಎರಡು ಕಾಲಿನ ಪಾದಗಳು ಅರ್ಧಕ್ಕೆ ತುಂಡಾಗಿವೆ. ಬಲಗಣ್ಣಿನ ಹುಬ್ಬಿನ ಬಳಿಯು ಪೆಟ್ಟಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕತ್ತಲಾಗಿದ್ದರಿಂದ ವಾಹನದ ಗುರುತು ಗೊತ್ತಾಗಿಲ್ಲ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Feet cut incident at kaimara circle near holehonnuru
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
![]()