ಭದ್ರಾವತಿ ವೀರಾಪುರದಲ್ಲಿ ಧಗಧಗ ಹೊತ್ತಿ ಉರಿದ ಲಾರಿ ಲೋಡ್, ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿತು ಭಾರಿ ಅನಾಹುತ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 2 MAY 2021 ಸುದ್ದಿಯ ಮುಂದಿನ 10 ಪ್ಯಾರಾಗಳು ಕೆಳಗಿವೆ.

ಟೈರ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಧಗಧಗ ಹೊತ್ತಿ ಉರಿದಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಲಾರಿ ಸಂಪೂರ್ಣ ಸುಟ್ಟು ಕರಕಲಾಗುವುದು ತಪ್ಪಿದೆ.

ಭದ್ರಾವತಿ ತಾಲೂಕು ವೀರಾಪುರದಲ್ಲಿ ಘಟನೆ ಸಂಭವಿಸಿದೆ. ಮದ್ಯಾಹ್ನ ವೀರಾಪುರಕ್ಕೆ ಬಂದ ಲಾರಿಗೆ ಬೆಂಕಿ ತಗುಲಿತ್ತು.

ಬೆಂಕಿ ತಗುಲಿದ್ದು ಹೇಗೆ?

ಮುಖ್ಯ ರಸ್ತೆಯಿಂದ ಆಲೆಮನೆಯೊಂದರ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕರೆಂಟ್ ಕಂಬದ ವೈರ್ ತಗುಲಿ, ಟಾರ್ಪಲ್‍ಗೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣದಲ್ಲಿ ಲಾರಿಯಲ್ಲಿದ್ದ ಟೈರ್‍ಗಳಿಗೆ ಬೆಂಕಿ ಆವರಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿದ್ದಾರೆ.

ಬೆಂಕಿ ನಿಗ್ರಹಕ್ಕೆ ಬಾರದ ಹಿನ್ನೆಲೆ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಲಾರಿಯಲ್ಲಿದ್ದ ಟೈರ್‍ಗಳಷ್ಟೆ ಸುಟ್ಟು ಹೋಗಿವೆ. ಲಾರಿಗೆ ಸ್ವಲ್ಪ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಟೈರ್ ತುಂಬಿದ್ದ ಲಾರಿಯು ಇಲ್ಲಿನ ಆಲೆಮನೆಯೊಂದಕ್ಕೆ ತೆರಳುತ್ತಿತ್ತು ಎಂದು ಹೇಳಲಾಗುತ್ತಿದೆ.

ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment