HOLEHONNURU, 1 AUGUST 2024 : ತುಂಗಾ ಮತ್ತು ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ. ಇದರಿಂದ ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ನೀರು ನುಗ್ಗಿ (Flood) ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಶಾಸಕಿ ಶಾರದಾ ಪೂರ್ಯಾನಾಯ್ಕ್, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಎಲ್ಲೆಲ್ಲಿ ನುಗ್ಗಿದೆ ನೀರು?
ಹೊಳೆಹೊನ್ನೂರಿನ ಎಂ.ಡಿ.ಕಾಲೋನಿಗೆ ತುಂಗಾಭದ್ರ ನದಿ ನೀರು ನುಗ್ಗಿದೆ. 13ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ವಡೇರಪುರದ ಎ.ಡಿ ಕಾಲೋನಿಯಲ್ಲಿ 4 ಮನೆಗಳು ಜಲಾವೃತವಾಗಿದೆ. ಇಲ್ಲಿಯ ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
![]() |
ಮಂಗೋಟೆಯಲ್ಲಿ ತೋಟ, ರಸ್ತೆ ಜಲಾವೃತ
ಇತ್ತ ಮಂಗೋಟೆ ಗ್ರಾಮದಲ್ಲಿ ತುಂಗಭದ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇಲ್ಲಿನ ತೋಟಗಳಿಗೆ ನೀರು ನುಗ್ಗಿದೆ. ನೀರು ಹರಿಯುತ್ತಿದ್ದರಿಂದ ಮಂಗೋಟೆ – ಆನವೇರಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ನದಿ ಪಾತ್ರದ ವಿವಿಧೆಡೆ ನೀರು ನುಗ್ಗಿರುವ ವರದಿಯಾಗಿದೆ.
ಎಂಎಲ್‌ಎ, ಅಧಿಕಾರಿಗಳು ಭೇಟಿ
ಇನ್ನು, ಹೊಳೆಹೊನ್ನೂರಿನಲ್ಲಿ ಜಲಾವೃತವಾದ ಪ್ರದೇಶಗಳಿಗೆ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭೇಟಿ ನೀಡಿ ಪರಿಶೀಲಿಸಿದರು. ಕಾಳಜಿ ಕೇಂದ್ರಕ್ಕ ತೆರಳಿದ್ದರು. ಇನ್ನು, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಅವರು ಭೇಟಿ ನೀಡಿದ್ದರು. ಜನಪ್ರತಿನಿಧಿಗಳು, ಅಧಿಕಾರಿಗಳ ಭೇಟಿ ಸಂದರ್ಭ ನಾಗರಿಕರು ನಮ್ಮ ನೋವು ತೋಡಿಕೊಂಡರು.
ಉಪ ತಹಶೀಲ್ದಾರ್ ವಿಜಯ್, ರಾಜಸ್ವ ನಿರೀಕ್ಷಕ ರವಿಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ ⇓
ಮತ್ತೊಂದು ವಿಮಾನ ನಿಲ್ದಾಣ ಮಂಜೂರಾತಿಗೆ ಮನವಿ ಸಲ್ಲಿಸಿದ ಶಿವಮೊಗ್ಗ ಸಂಸದ ರಾಘವೇಂದ್ರ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200