ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOLEHONNURU, 1 AUGUST 2024 : ತುಂಗಾ ಮತ್ತು ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ. ಇದರಿಂದ ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ನೀರು ನುಗ್ಗಿ (Flood) ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಶಾಸಕಿ ಶಾರದಾ ಪೂರ್ಯಾನಾಯ್ಕ್, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೊಳೆಹೊನ್ನೂರಿನ ಎಂ.ಡಿ.ಕಾಲೋನಿಗೆ ತುಂಗಾಭದ್ರ ನದಿ ನೀರು ನುಗ್ಗಿದೆ. 13ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ವಡೇರಪುರದ ಎ.ಡಿ ಕಾಲೋನಿಯಲ್ಲಿ 4 ಮನೆಗಳು ಜಲಾವೃತವಾಗಿದೆ. ಇಲ್ಲಿಯ ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.ಎಲ್ಲೆಲ್ಲಿ ನುಗ್ಗಿದೆ ನೀರು?
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಂಗೋಟೆಯಲ್ಲಿ ತೋಟ, ರಸ್ತೆ ಜಲಾವೃತ
ಇತ್ತ ಮಂಗೋಟೆ ಗ್ರಾಮದಲ್ಲಿ ತುಂಗಭದ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇಲ್ಲಿನ ತೋಟಗಳಿಗೆ ನೀರು ನುಗ್ಗಿದೆ. ನೀರು ಹರಿಯುತ್ತಿದ್ದರಿಂದ ಮಂಗೋಟೆ – ಆನವೇರಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ನದಿ ಪಾತ್ರದ ವಿವಿಧೆಡೆ ನೀರು ನುಗ್ಗಿರುವ ವರದಿಯಾಗಿದೆ.
ಎಂಎಲ್ಎ, ಅಧಿಕಾರಿಗಳು ಭೇಟಿ
ಇನ್ನು, ಹೊಳೆಹೊನ್ನೂರಿನಲ್ಲಿ ಜಲಾವೃತವಾದ ಪ್ರದೇಶಗಳಿಗೆ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭೇಟಿ ನೀಡಿ ಪರಿಶೀಲಿಸಿದರು. ಕಾಳಜಿ ಕೇಂದ್ರಕ್ಕ ತೆರಳಿದ್ದರು. ಇನ್ನು, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಅವರು ಭೇಟಿ ನೀಡಿದ್ದರು. ಜನಪ್ರತಿನಿಧಿಗಳು, ಅಧಿಕಾರಿಗಳ ಭೇಟಿ ಸಂದರ್ಭ ನಾಗರಿಕರು ನಮ್ಮ ನೋವು ತೋಡಿಕೊಂಡರು.
ಉಪ ತಹಶೀಲ್ದಾರ್ ವಿಜಯ್, ರಾಜಸ್ವ ನಿರೀಕ್ಷಕ ರವಿಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.