ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ಅಡಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್‌ಎಲ್), ರಾಜ್ಯ ಸರ್ಕಾರದ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯನ್ನು (ಎಂಪಿಎಂ) ಅಭಿವೃದ್ಧಿಪಡಿಸಲು ಆಗ್ರಹಿಸಿ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬೆಂಗಳೂರು ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್. ರಾಜು ತಿಳಿಸಿದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಖಾನೆಗಳನ್ನು ಅಭಿವೃದ್ಧಿಪಡಿಸುವುದಾಗಿ ಪದೇ ಪದೆ ಹೇಳಿಕೆ ನೀಡಿ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿವೆ. ಆದರೆ ಎರಡು ಕಾರ್ಖಾನೆಗಳ ಅಭಿವೃದ್ಧಿಗೆ ಮಾಡದಿರುವುದು ಬೇಸರದ ಸಂಗತಿ ಎಂದರು.
ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಪುನರ್ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಪಾದಯಾತ್ರೆ ಮಾಡಲಾಗುತ್ತಿದೆ. ಕ್ಷೇತ್ರದ ನಾಗರಿಕರು, ರೈತರು, ಕೂಲಿಕಾರ್ಮಿಕರು, ಆಟೋ – ಟ್ಯಾಕ್ಸಿ ಚಾಲಕರು, ಬೀದಿ ವ್ಯಾಪಾರಿಗಳು, ವಕೀಲರು, ಮಹಿಳೆಯರು, ಕಾರ್ಮಿಕರು, ಕಾರ್ಮಿಕರು, ದಲಿತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಪ್ರಮುಖರಾದ ಅಕ್ರಮ್ ಖಾನ್, ಸೋಮಣ್ಣ, ಶ್ರೀನಿವಾಸ್, ಏಕಾಂತಪ್ಪ, ರಾಜಪ್ಪ ಮತ್ತಿತರರು ಇದ್ದರು.