ಭದ್ರಾವತಿಯಲ್ಲಿ ಹೈಟೆಕ್ ಖಾಸಗಿ ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಗರದಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರು ಹಾಗೂ ಏಜೆಂಟರ ಬೇಡಿಕೆಗೆ ಸ್ಪಂದಿಸಿ 2.25 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. 2018ರಲ್ಲಿ ಸಾರಿಗೆ ಇಲಾಖೆಗೆ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು.

ಅತ್ಯಾಧುನಿಕ ಬಸ್‌ ನಿಲ್ದಾಣಕ್ಕೆ ಮನವಿ

ಕಾಮಗಾರಿಗೆ 2.25 ಕೋಟಿ ರೂ. ಮಂಜೂರಾಗಿದ್ದು ಟೆಂಡರ್ ಕರೆಯಲಾಗಿದೆ. ಭದ್ರಾವತಿಯ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣವನ್ನು ಬೆಂಗಳೂರು ಬಸ್ ನಿಲ್ದಾಣದಂತೆ ಹೈಟೆಕ್ ಮಾಡಲಾಗುವುದು. ಅದಕ್ಕೆ ಸಂಬಂಧಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಾರಿಗೆ ಸಚಿವರಿಗೂ ಮನವಿ ಮಾಡಲಾಗಿದೆ. 4 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಸಂಗಮೇಶ್ವರ್ ಭರವಸೆ ನೀಡಿದರು. ‌

ಎಂಪಿಎಂ ಪುನಾರಂಭಕ್ಕೆ ಮನವಿ

ಎಂಪಿಎಂ ಪುನರಾರಂಭಿಸುವಂತೆ ಸದನದಲ್ಲಿ ಒತ್ತಾಯಿಸಿದ್ದೇನೆ. ವಿಐಎಸ್‌ಎಲ್ ಕಾರ್ಖಾನೆಗೆ 5 ಸಾವಿರ ಕೋಟಿ ರೂ. ಒದಗಿಸಿ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಲು ಒತ್ತಡ ಹಾಕಲಾಗಿದೆ ಎಂದು ಶಾಸಕ ಸಂಗಮೇಶ್ವರ್‌ ಹೇಳಿದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ.ಚಂದ್ರೇಗೌಡ, ಖಾಸಗಿ ಬಸ್ ನಿಲ್ದಾಣದ ಅಧ್ಯಕ್ಷ ಶ್ರೀನಿವಾಸ್, ಮಾದಣ್ಣ, ಪ್ರಕಾಶ್, ವಿನೋದ್, ಲೋಕನಾಥ್, ಬಾಬುಜಾನ್, ಧರ್ಮರಾಜ್, ಮಂಜು ಇತರರಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment