ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021
ನಗರದಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರು ಹಾಗೂ ಏಜೆಂಟರ ಬೇಡಿಕೆಗೆ ಸ್ಪಂದಿಸಿ 2.25 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. 2018ರಲ್ಲಿ ಸಾರಿಗೆ ಇಲಾಖೆಗೆ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಅತ್ಯಾಧುನಿಕ ಬಸ್ ನಿಲ್ದಾಣಕ್ಕೆ ಮನವಿ
ಕಾಮಗಾರಿಗೆ 2.25 ಕೋಟಿ ರೂ. ಮಂಜೂರಾಗಿದ್ದು ಟೆಂಡರ್ ಕರೆಯಲಾಗಿದೆ. ಭದ್ರಾವತಿಯ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣವನ್ನು ಬೆಂಗಳೂರು ಬಸ್ ನಿಲ್ದಾಣದಂತೆ ಹೈಟೆಕ್ ಮಾಡಲಾಗುವುದು. ಅದಕ್ಕೆ ಸಂಬಂಧಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಾರಿಗೆ ಸಚಿವರಿಗೂ ಮನವಿ ಮಾಡಲಾಗಿದೆ. 4 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಸಂಗಮೇಶ್ವರ್ ಭರವಸೆ ನೀಡಿದರು.
ಎಂಪಿಎಂ ಪುನಾರಂಭಕ್ಕೆ ಮನವಿ
ಎಂಪಿಎಂ ಪುನರಾರಂಭಿಸುವಂತೆ ಸದನದಲ್ಲಿ ಒತ್ತಾಯಿಸಿದ್ದೇನೆ. ವಿಐಎಸ್‌ಎಲ್ ಕಾರ್ಖಾನೆಗೆ 5 ಸಾವಿರ ಕೋಟಿ ರೂ. ಒದಗಿಸಿ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಲು ಒತ್ತಡ ಹಾಕಲಾಗಿದೆ ಎಂದು ಶಾಸಕ ಸಂಗಮೇಶ್ವರ್ ಹೇಳಿದರು.
ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ.ಚಂದ್ರೇಗೌಡ, ಖಾಸಗಿ ಬಸ್ ನಿಲ್ದಾಣದ ಅಧ್ಯಕ್ಷ ಶ್ರೀನಿವಾಸ್, ಮಾದಣ್ಣ, ಪ್ರಕಾಶ್, ವಿನೋದ್, ಲೋಕನಾಥ್, ಬಾಬುಜಾನ್, ಧರ್ಮರಾಜ್, ಮಂಜು ಇತರರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]