ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 AUGUST 2023
HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು (Gandhi Statue) ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಕೃತ್ಯ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ.
ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿದ್ದ (Gandhi Circle) ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ – ಒಂದು ದಿನದ ಮಗುವಿಗಾಗಿ ಎರಡು ಜಿಲ್ಲೆಯ ಪೊಲೀಸರಿಂದ ಜೀರೋ ಟ್ರಾಫಿಕ್
ಸರ್ಕಲ್‌ನಲ್ಲಿ ಗಾಂಧಿ ಪ್ರತಿಮೆ, ಅದರ ಸುತ್ತಲು ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422