ಸೀಮಂತ ಕಾರ್ಯಕ್ರಮದ ವೇಳೆ ಚಿನ್ನದ ಸರ ನಾಪತ್ತೆ, 3 ಮಹಿಳೆಯರ ವಿರುದ್ಧ ಶಂಕೆ, ಯಾರದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಭದ್ರಾವತಿ: ಸೀಮಂತ ಕಾರ್ಯಕ್ರಮದಲ್ಲಿ ಬಾಲಕಿಯ ಕೊರಳಿನಲ್ಲಿದ್ದ ಚಿನ್ನದ ಸರ ಕಳ್ಳತನವಾಗಿದೆ. ಭದ್ರಾವತಿ ತಾಲೂಕಿನ ಸುಲ್ತಾನಮಟ್ಟಿ ಗ್ರಾಮದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಗ್ರಾಮದ ರಂಜಿತಾ ಅವರ ಮನೆಯಲ್ಲಿ ಅವರ ತಮ್ಮನ ಹೆಂಡತಿಯ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭಕ್ಕೆ ಕುಟುಂಬದ ಬಂಧುಗಳು ಹಾಗೂ ಗ್ರಾಮಸ್ಥರು ಆಗಮಿಸಿದ್ದರು. ಕಾರ್ಯಕ್ರಮದ ವೇಳೆ ರಂಜಿತಾ ಅವರ ಮಗಳ ಕೊರಳಿಗೆ 12 ಗ್ರಾಂ ತೂಕದ ಬಂಗಾರದ ಸರ ಹಾಕಲಾಗಿತ್ತು. ಕಾರ್ಯಕ್ರಮದ ವೇಳೆ ಬಾಲಕಿಯ ಕೊರಳಿನಲ್ಲಿದ್ದ ಸರ ನಾಪತ್ತೆಯಾಗಿರುವುದು ಕುಟುಂಬದವರ ಗಮನಕ್ಕೆ ಬಂದಿದೆ.

BHADRAVATHI-NEWS-GRAPHICS-BY-SHIVAMOGGA-LIVE.

ಕಳುವಾಗಿರುವ ಚಿನ್ನದ ಸರದ ಮೌಲ್ಯ ₹1,20,000 ಎಂದು ಅಂದಾಜಿಸಲಾಗಿದೆ. ಮನೆಯವರು ಮತ್ತು ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಚಿನ್ನದ ಸರ ಪತ್ತೆಯಾಗಿಲ್ಲ. ಅಡುಗೆ ಕೆಲಸಕ್ಕೆ ಬಂದಿದ್ದವರ ಜೊತೆ ಗುರುತಿಸಿಕೊಂಡಿದ್ದ ಮೂವರು ಮಹಿಳೆಯರ ಮೇಲೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಕುಟುಂಬದವರು ತಡವಾಗಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಿ ಲಿಖಿತ ದೂರು ನೀಡಿದ್ದಾರೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!