ಹೊಳೆಹೊನ್ನೂರು: ಯಡೇಹಳ್ಳಿಯಲ್ಲಿ ಅಪರಿಚಿತ ಸರಕು ಸಾಗಣೆ ವಾಹನ (Goods Vehicle) ಡಿಕ್ಕಿಯಾಗಿ ಗಾಯಗೊಂಡಿದ್ದ ಬಿ.ಪುನೀತ್ ರಾಜ್ (19) ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯಡೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ದಾಟುವಾಗ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಪುನೀತ್‌ರಾಜ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದಿಂದಾಗಿ ಬಹು ಅಂಗಾಂಗಕ್ಕೆ ಪೆಟ್ಟಾಗಿ ಹಾನಿಯಾಗಿ, ಕೋಮಾ ತಲುಪಿದ್ದರು.

ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಿಕಿತ್ಸೆಗೆ ಸ್ಪಂದಿಸದ ಕಾರಣ ಅಲ್ಲಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಮೃತರಿಗೆ ತಂದೆ ಡ್ರೈವರ್ ಬಸವರಾಜ್, ತಾಯಿ ಹೇಮಾವತಿ, ತಮ್ಮ ಮೋಹಿತ್ ರಾಜ್ ಇದ್ದಾರೆ.
ಮಗನ ಸಾವಿನಲ್ಲು ಮಾನವೀಯತೆ
ಮಗ ಬದುಕುಳಿಯುವ ಸಾಧ್ಯತೆ ಕ್ಷೀಣಿಸಿದ್ದರಿಂದ ಕೋಮಾ ಸ್ಥಿತಿಯಲ್ಲಿದ್ದಾಗಲೆ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನ ಮಾಡಲು ಜಾಲತಾಣದಲ್ಲಿ ಮಾಹಿತಿ ಹರಿಬಿಡಲಾಗಿತ್ತು. ಆದರೆ, ಸಕಾಲದಲ್ಲಿ ಯಾರೂ ಸ್ಪಂದಿಸದ ಕಾರಣ ನೇತ್ರದಾನ ಮಾತ್ರ ಮಾಡಲು ಸಾಧ್ಯವಾಗಿದೆ. ಹೆತ್ತವರು ಮಗನ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.
youth succumbed to Goods Vehicle
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





