SHIVAMOGGA LIVE NEWS, 5 DECEMBER 2024
ಹೊಳೆಹೊನ್ನೂರು : ರಸ್ತೆಯಲ್ಲಿನ ಗುಂಡಿಗಳಿಂದ ಗ್ರಾಮಸ್ಥರು ಅನುಭವಿಸುತ್ತಿರುವ ತೊಂದರೆ ಮನಗಂಡ ಆನವೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಿಗೆಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ತಾವೇ ಸ್ವತಃ ಗುಂಡಿಗಳಿಗೆ (Pot Hole) ಮಣ್ಣು ಸುರಿದು ರಸ್ತೆ ದುರಸ್ತಿ ಮಾಡಿದ್ದಾರೆ.
![]() |
ಭದ್ರಾವತಿ ತಾಲೂಕು ಆವೇರಿಯಿಂದ ಇಟ್ಟಿಗೆಹಳ್ಳಿ ಸಂರ್ಪಕ ಕಲ್ಪಿಸುವ ಡಾಂಬರ್ ರಸ್ತೆ ಹಲವೆಡೆ ಕಿತ್ತುಹೋಗಿತ್ತು. ಮಳೆ ನೀರು ನಿಂತು ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಇದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಓಡಾಡುವುದು ಸಹ ಕಷ್ಟವಾಗುತ್ತಿತ್ತು. ಇದ ಕಾರಣಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ಭಾನುವಾರ 4 ಟ್ರ್ಯಾಕ್ಟರ್ ಲೋಡ್ ಮಣ್ಣು ತರಿಸಿ ಗುಂಡಿಗಳನ್ನು ಮುಚ್ಚಿದ್ದಾರೆ.
ಇದನ್ನೂ ಓದಿ » ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್
ಇಟ್ಟಿಗೆಹಳ್ಳಿಯ ನೀರುಗಂಟಿ ಪರುಶುರಾಮ್ ಹಾಗೂ ಆನವೇರಿ ಗ್ರಾಮ ಪಂಚಾಯಿತಿ ಕರವಸೂಲಿಗಾರ ರಘು ಹಾಗೂ ಇಟ್ಟಿಗೆಹಳ್ಳಿ ಯುವಕ ಸುನೀಲ್ ಅವರು ತಿಪ್ಪೇಶ್ ನೆರವಿಗೆ ಬಂದಿದ್ದಾರೆ. ಗುಂಡಿಗಳಿಗೆ ಮಣ್ಣು ಸುರಿದು ಓಡಾಟಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರಾಪಂ ಸದಸ್ಯರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸೇರಿ ಜಿಲ್ಲೆಯ ಹಲವಡೆ ಮತ್ತೆ ಮಳೆ ಶುರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200