ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 MAY 2021
ಕರೋನ ಸೋಂಕಿನಿಂದ ಮೃತಳಾದ ಮಹಿಳೆಯ ಶವ ಇರಿಸಿಕೊಂಡು ಗ್ರಾಮಸ್ಥರು ಪ್ರತಿಭಟನೆ ನಡಸಿದ್ದಾರೆ. ಸ್ಮಶಾನಕ್ಕೆ ಭೂಮಿ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿ ತಾಲೂಕು ಅಂತರಗಂಗೆ ಬಳಿಯ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರದಲ್ಲಿ ಘಟನೆ ನಡೆದಿದೆ. ಕೋವಿಡ್‍ನಿಂದ ಮೃತಳಾದ ಜವರಮ್ಮ (70) ಎಂಬುವವರ ಮೃತದೇಹವನ್ನು ರಸ್ತೆಯಲ್ಲಿ ಇರಿಸಿ ಗ್ರಾಮಸ್ಥರು ಪ್ರತಿಭಟಿಸಿದರು.
ಸ್ಮಶಾನಕ್ಕೆ ಜಾಗ ನೀಡುವಂತೆ ಬಹು ಸಮಯದಿಂದ ಗ್ರಾಮಸ್ಥರು ಆಗ್ರಹಿಸುತ್ತಿದ್ದರು. ಆದರೆ ಇದಕ್ಕೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿರಲಿಲ್ಲ ಎಂಬ ಆರೋಪವಿದೆ. ಕೋವಿಡ್‍ನಿಂದ ಜವರಮ್ಮ ಮೃತಪಟ್ಟಿದ್ದು, ಅವರ ಮೃತದೇಹವನ್ನು ಗ್ರಾಮಕ್ಕೆ ತಂದಾಗ ಗ್ರಾಮಸ್ಥರು ಒಗ್ಗೂಡಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಅಧಿಕಾರಿಗಳು ದೌಡು
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಭರವಸೆ ನೀಡುವವರೆಗೆ ಅಂತ್ಯ ಸಂಸ್ಕಾರ ನೆರವೇರಿಸುವುದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದರು. ವಿಚಾರ ತಿಳಿಯುತ್ತಿದ್ದಂತೆ ಕಂದಾಯ ಅಧಿಕಾರಿ ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ಜಗನ್ನಾಥ್ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿದರು. ಸ್ಮಶಾನಕ್ಕೆ ಸಂಬಂಧಿಸಿದ ಜಾಗದ ಕಡತವನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದರು. ಆ ಬಳಿಕ ಜವರಮ್ಮ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಜವರಮ್ಮ ಅವರ ಮೃತದೇಹ ಸಾಗಿಸಲು ಆಂಬುಲೆನ್ಸ್‍ನವರು ದುಬಾರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಾಗಾಗಿ ಬಜರಂಗದಳ ಕಾರ್ಯಕರ್ತರು ಮೃತದೇಹವನ್ನು ಉಚಿತವಾಗಿ ಸಾಗಣೆ ಮಾಡಿದ್ದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾಂತಾ ಬಾಯಿ, ಉಮಾ ಸುರೇಶ್, ಸುರೇಶ್, ರಮೇಶ್, ರಾಜಶೇಖರ್, ಮಹೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]