VISLನಲ್ಲಿ ದಿಢೀರ್‌ ನಡೆಯಿತು ಎರಡನೇ ಮೀಟಿಂಗ್‌, ಕುಮಾರಸ್ವಾಮಿ ನೀಡಿದ ಭರವಸೆ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy), ಬಳಿಕ ಕಾರ್ಖಾನೆಯ ವಿವಿಧ ಘಟಕಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಒಂದೇ ಭೇಟಿಯಲ್ಲಿ ಎರಡು ಸಭೆ

ವಿಐಎಸ್‌ಎಲ್‌ ವಸತಿ ಗೃಹದಲ್ಲಿ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮೊದಲ ಹಂತದ ಸಭೆ ನಡೆಸಿದರು. ಈ ಸಭೆಯಲ್ಲಿ ಕಾರ್ಖಾನೆಯ ಪ್ರಸ್ತುತ ಸ್ಥಿತಿ, ಪುನಶ್ಚೇತನದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರದ ಆಸಕ್ತಿಯ ಕುರಿತು ಸಚಿವರು ಸಭೆಗೆ ತಿಳಿಸಿದರು.

ಸಭೆ ಬಳಿಕ ವಿಐಎಸ್‌ಎಲ್‌ ಕಾರ್ಖಾನೆಯ ವಿವಿಧ ಘಟಕಗಳಿಗೆ (UNITS) ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿದರು. ಭೇಟಿಯ ಬಳಿಕ ಕುಮಾರಸ್ವಾಮಿ ಅವರು ಅಧಿಕಾರಿಗಳ ಜೊತೆಗೆ ಎರಡನೇ ಸುತ್ತು ಸಭೆ ನಡೆಸಿದರು. ಕಾರ್ಖಾನೆ ಉಳಿಸುವ ಮಾರ್ಗೋಪಾಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ಅಲ್ಲದೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಹಿರಿಯ ಅಧಿಕಾರಿಗಳ ಜತೆಗೆ ಕೆಲ ಮಹತ್ವದ ಮಾಹಿತಿ ಪಡೆದರು.

291125-Central-Minister-HD-Kumaraswamy-visit-VISL

ಧರಣಿ ಸ್ಥಳಕ್ಕೆ ಮಿನಿಸ್ಟರ್‌ ಭೇಟಿ

ಇನ್ನು, ಕಾರ್ಖಾನೆ ಮುಂಭಾಗ ವಿಐಎಸ್‌ಎಲ್‌ ಕಾರ್ಮಿಕರು (WORKERS) ನಿರಂತರ ಧರಣಿ ನಡೆಸುತ್ತಿದ್ದಾರೆ. ಧರಣಿ ಸ್ಥಳಕ್ಕು ಸಚಿವ ಕುಮಾರಸ್ವಾಮಿ ಭೇಟಿ ನೀಡಿದರು. ಕಾರ್ಮಿಕರನ್ನು ಭೇಟಿಯಾಗಿ ಜೊತೆಗೆ ಚರ್ಚಿಸಿ, ಅಭಯ ನೀಡಿದರು.

ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅವರು ಸ್ವಾತಂತ್ರ್ಯ ಪೂರ್ವದಲ್ಲಿಯೇ ಕಟ್ಟಿದ್ದ ಈ ಕಾರ್ಖಾನೆ ರಾಷ್ಟ್ರದ ಉಕ್ಕು ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದೆ. ಹೇಗಾದರೂ ಮಾಡಿ ಕಾರ್ಖಾನೆಯನ್ನು ಉಳಿಸುವ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಚಿಂತನೆ ನಡೆಸುತ್ತಿದೆ. ನಾನು ಉಕ್ಕು ಸಚಿವನಾದ ಮೇಲೆ ಈ ಕಾರ್ಖಾನೆಗೆ ಎರಡನೇ ಸಲ ಭೇಟಿ ನೀಡಿದ್ದೇನೆ. ಕೇಂದ್ರ ಸರ್ಕಾರ ಎಷ್ಟು ಗಂಭೀರವಾಗಿ ಕಾರ್ಖಾನೆಯನ್ನು ಪರಿಗಣಿಸಿದೆ ಎಂಬುದಕ್ಕೆ ನನ್ನ ಭೇಟಿಯೇ ಸಾಕ್ಷಿʼ ಎಂದರು.

291125-Central-Minister-HD-Kumaraswamy-visit-VISL

‘ಪ್ರಧಾನಿ ನರೇಂದ್ರ ಮೋದಿ (NARENDRA MODI) ಅವರು ಉಕ್ಕು ಕ್ಷೇತ್ರದ ಬಲವರ್ಧನೆಗೆ ಅತಿಹೆಚ್ಚು ಮಹತ್ವ ನೀಡುತ್ತಿದ್ದಾರೆ. ಉಕ್ಕು ಉತ್ಪಾದನೆಯಲ್ಲಿ ಸ್ವಾವಲಂಭನೆ ಸಾಧಿಸಬೇಕು ಎನ್ನುವ ಹೆಗ್ಗುರಿಯನ್ನು ಮೋದಿ ಅವರು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಬಹಳ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಕಾರ್ಮಿಕರು ಆತಂಕಗೊಳ್ಳುವುದು ಬೇಡʼ ಎಂದು ಹೇಳಿದರು.

291125-Central-Minister-HD-Kumaraswamy-visit-VISL

ಸಂಸದರಿಂದ ಪ್ರಮುಖ ವಿಚಾರ ಚರ್ಚೆ

ಇನ್ನು ಪರಿಶೀಲನೆ ವೇಳೆ ಸಂಸದ ಬಿ.ವೈ.ರಾಘವೇಂದ್ರ (BY RAGHAVENDRA) ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಹತ್ವದ ವಿಷಯಗಳನ್ನು ತಿಳಿಸಿದ್ದಾರೆ. ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಕ್ರಮಗಳ ಕುರಿತು ತಿಳಿಸಿದ್ದಾರೆ.‌

ಇದನ್ನೂ ಓದಿ » ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಸಭೆ, ಯಾರೆಲ್ಲ ಇದ್ದರು?

[su_quote cite=”ಬಿ.ವೈ.ರಾಘವೇಂದ್ರ, ಸಂಸದ“]ಬಂಡವಾಳ ಹಿಂತೆಗೆದ ಪ್ರಕ್ರಿಯೆ ಬಳಿಕ ಮತ್ತು ಬೃಹತ್‌ ಕೈಗಾರಿಕೆ ಸಚಿವರಾದ ಮೇಲೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಎರಡನೆ ಬಾರಿ ವಿಐಎಸ್‌ಎಲ್‌ಗೆ ಭೇಟಿ ನೀಡಿದ್ದಾರೆ. ಕಳೆದ 20 ವರ್ಷದಿಂದ ಸಚಿವರು, ಅಧಿಕಾರಿಗಳ ಜೊತೆಗೆ ನಿರಂತರ ಸಭೆಗಳಾಗಿವೆ. ಇವತ್ತಿನ ಸಭೆ ವಿಶ್ವಾಸ ಮೂಡಿಸಿದೆ. ಮುಂದೆ ಈ ಸಂಸ್ಥೆಯನ್ನು ಒಳ್ಳೆಯ ದಿಕ್ಕಿನಲ್ಲಿ ಕೊಂಡೊಯ್ಯಲು ಸಚಿವ ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿದ್ದಾರೆ. ಸಂಸದನಾಗಿ ವಿಐಎಸ್‌ಎಲ್‌ಗೆ ಆಕ್ಸಿಜನ್‌ ಒದಗಿಸಿ ಕಾರ್ಖಾನೆ ನಿಲ್ಲದಂತೆ ನೋಡಿಕೊಂಡಿದ್ದೇನೆ. ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇವೆ.[/su_quote]

HD Kumaraswamy visit to VISL

ಕಾರ್ಮಿಕರಲ್ಲಿ ಹೆಚ್ಚಿದ ನಿರೀಕ್ಷೆ

ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಮೇಲೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿ ವಿಐಎಸ್‌ಎಲ್‌ ಕಾರ್ಖಾನೆಗೆ ಭೇಟಿ ನೀಡಿದ್ದಾರೆ. 2024ರ ಜೂನ್‌ 30ರಂದು ಕುಮಾರಸ್ವಾಮಿ ಅವರು ವಿಐಎಸ್‌ಎಲ್‌ಗೆ ಭೇಟಿ ನೀಡಿ ಪುನಶ್ಚೇತನ ಸಂಬಂಧ ಚರ್ಚೆ ನಡೆಸಿದ್ದರು. ಆ ಬಳಿಕ ಹಲವು ಸೇಲ್‌ ಅಧಿಕಾರಿಗಳ ಜೊತೆಗೆ ಹಲವು ಸಭೆಗಳನ್ನು ನಡೆಸಿದ್ದರು. ಈಗ ಎರಡನೇ ಬಾರಿ ವಿಐಎಸ್‌ಎಲ್‌ಗೆ ಭೇಟಿ ನೀಡಿದ್ದು, ಕಾರ್ಮಿಕರ ನಿರೀಕ್ಷೆ ಹೆಚ್ಚಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 29, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment