ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ನಿಧನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಪ್ಪಾಜಿಗೌಡ ಅವರಿಗೆ ಆಗದವರು ಅವರ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಪ್ಪಾಜಿಗೌಡ ಅವರ ಪುಣ್ಯ ಸ್ಮರಣೆ ಕಾರ್ಯಕ್ಕೆ ಭದ್ರಾವತಿಗೆ ಆಗಮಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ಪಾಜಿಗೌಡ ಅವರ ಸಾವಿನ ಕುರಿತು ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಒಂದು ಖಾಸಗಿ ಆಸ್ಪತ್ರೆಯಲ್ಲಿ ಜನಪ್ರತಿನಿಧಿಯೊಬ್ಬರಿಗೆ ವೆಂಟಿಲೇಟರ್ ಸಿಗಲಿಲ್ಲ ಅಂದರೆ ಏನರ್ಥ ಎಂದು ಪ್ರಶ್ನಿಸಿದರು.
ಕುಟುಂಬದವರಾರಿಗೂ ಸೋಂಕು ಇಲ್ಲ
ಅಪ್ಪಾಜಿಗೌಡ ಅವರಿಗೆ ಕರೋನ ಇತ್ತು ಎಂದು ಹೇಳುತ್ತಿದ್ದಾರೆ. ಆದರೆ ಅವರ ಕುಟುಂಬದವರಾರಿಗೂ ಸೋಂಕು ಕಾಣಿಸಿಕೊಂಡಿಲ್ಲ. ಇದೆಲ್ಲವನ್ನು ಗಮನಿಸಿದರೆ ಅಪ್ಪಾಜಿಗೌಡ ಅವರ ಸಾವಿನ ಕುರಿತು ಅನುಮಾನ ಮೂಡುತ್ತದೆ. ವಿಚಾರ ಗೊತ್ತಾಗಿದ್ದರೆ ಬೆಳಗ್ಗೆಯೇ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು, ಚಿಕಿತ್ಸೆ ಕೊಡಿಸುತ್ತಿದ್ದೆ ಎಂದರು.
ಕರೋನ ಅಲ್ಲ ಹೃದಯಾಘಾತ
ಸ್ಮರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಪುತ್ರ ಅಜಿತ್, ನಮ್ಮ ತಂದೆಯವರಿಗೆ ಕರೋನ ಬಂದಿರಲಿಲ್ಲ. ಅವರಿಗೆ ಹೃದಯಾಘಾತವಾಗಿದೆ. ಡಾಕ್ಟರ್‍ಗಳು ಕೋವಿಡ್‍ನಿಂದ ತೀರಿಕೊಂಡಿದ್ದಾರ ಎಂದು ಸುಳ್ಳು ಹೇಳಿದ್ದಾರೆ. ತಂದೆಯವರು ಆರೋಗ್ಯವಾಗಿದ್ದರು. ಸಂಜೆ 5.30ರ ಹೊತ್ತಿಗೆ ಉಸಿರಾಟದ ಸಮಸ್ಯೆಯಾಗಿತ್ತು ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]