ಭದ್ರಾವತಿಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ, ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
SHIVAMOGGA LIVE NEWS | BHADRAVATHI | 20 ಜೂನ್ 2022
➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಕ್ರಿಕೆಟ್ (CRICKET) ಆಡುವಾಗ ಹೃದಯಾಘಾತ ಸಂಭವಿಸಿ ನಗರಸಭೆ ಹೊರಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ವಿಐಎಸ್ಎಲ್ (VISL) ಕ್ರೀಡಾಂಗಣದಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ದಿನೇಶ್ ರಾವ್ (38) ಹೃದಯಾಘಾತದಿಂದ ಮೃತರಾಗಿದ್ದಾರೆ. ಕ್ರಿಕೆಟ್’ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ದಿನೇಶ್ ರಾವ್ ಏಕಾಏಕಿ ಕುಸಿದು ಬಿದ್ದಿದ್ದಾರೆ.

ಹೇಗಾಯ್ತು ಘಟನೆ?

ನಗರಸಭೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಉದ್ಘಾಟನಾ ಸಮಾರಂಭದ ಬಳಿಕ ನಗರಸಭೆ ಸದಸ್ಯರು ಮತ್ತು ವಾಟರ್ ಸಪ್ಲಯರ್’ಗಳ ತಂಡದ ನಡುವೆ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ದಿನೇಶ್ ರಾವ್ ಫೀಲ್ಡಿಂಗ್ ಮಾಡುತ್ತಿದ್ದರು.

ಕ್ರೀಡಾಂಗಣದಲ್ಲೇ ದಿನೇಶ್ ರಾವ್ ಕುಸಿದು ಬಿದ್ದಿದ್ದಾರೆ. ಕೂಡಲೆ ಆಂಬುಲೆನ್ಸ್’ನಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ಮೊದಲೆ ದಿನೇಶ್ ರಾವ್ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ. ದಿನೇಶ್’ಗೆ ಪತ್ನಿ, ಪುತ್ರಿ ಮತ್ತು 20 ದಿನದ ಪುತ್ರ ಇದ್ದಾರೆ.

ಇದನ್ನೂ ಓದಿ – ‘ಕುಜ ದೋಷ’ ತಂದ ಆಪತ್ತು, ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

Shimoga Live whatsapp scanner

whatsapp-smg-live

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment