ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಳೆಹೊನ್ನೂರು: ಪಟ್ಟಣದ ಭದ್ರಾ ಸೇತುವೆ ಬಳಿ ಇತ್ತೀಚೆಗೆ ನಿರ್ಮಿಸಿರುವ ಬೈಪಾಸ್ ರಸ್ತೆಯಲ್ಲಿ ಬಿರುಕು (Crack) ಕಾಣಿಸಿಕೊಂಡಿದೆ. ಇದನ್ನು ವಿರೋಧಿಸಿ ನಾಗರಿಕರು ಪ್ರತಿಭಟನೆ ನಡೆಸಿದರು.
ಒಂದು ತಿಂಗಳ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಹೆದ್ದಾರಿಯ ಲೋಕಾರ್ಪಣೆ ಮಾಡಿದ್ದರು. ಆದರೆ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ರಸ್ತೆ ಅಭಿವೃದ್ಧಿಪಡಿಸುವಲ್ಲಿ ಗುತ್ತಿಗೆದಾರರು ಆತುರ ತೋರಿದ್ದರಿಂದ ಅದು ಕುಸಿಯುವ ಹಂತದಲ್ಲಿದೆ. ಕಾಮಗಾರಿ ನಡೆಯುತ್ತಿರುವಾಗಲೇ ಎರಡು ಮೂರು ಬಾರಿ ರಸ್ತೆ ಕುಸಿತವಾಗಿತ್ತು. ಇದರಿಂದ ಎಚ್ಚೆತ್ತುಕೊಳ್ಳದೇ, ಕಾಮಗಾರಿ ಪೂರ್ಣಗೊಳಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆ ಕುಸಿಯುವ ಆತಂಕ ಸೃಷ್ಟಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆಗೆ ಪೂರ್ತಿ ಪ್ರಮಾಣದಲ್ಲಿ ತಡೆಗೋಡೆ ನಿರ್ಮಿಸಿದ್ದರೆ ರಸ್ತೆ ಕುಸಿಯುತ್ತಿರಲಿಲ್ಲ. ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು, ಇದರಿಂದ ವಾಹನ ಸವಾರರಿಗೆ ಅಪಾಯ ತಪ್ಪಿದ್ದಲ್ಲ’ ಎಂದು ದೂರಿದರು.
ಪ್ರತಿಭಟನೆಯಲ್ಲಿ ನಾಗೇಶ, ಕೇಶವ, ನಾಗರಾಜ್, ನವೀನ, ವೆಂಕಟೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






