ಹೊಳೆಹೊನ್ನೂರಿನಲ್ಲಿ ವ್ಯಕ್ತಿಗೆ ವಾಹನ ಡಿಕ್ಕಿ, ಚಿಕಿತ್ಸೆ ಫಲಿಸದೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ ಲೈವ್.ಕಾಂ | ಹೊಳೆಹೊನ್ನೂರು

ಹೊಳೆಹೊನ್ನೂರು ಪಟ್ಟಣದ ರೈಸ್ ಮಿಲ್ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

holehonnur name graphics

ಎಲ್ಲಿ? ಹೇಗಾಯ್ತು ಘಟನೆ?

ಆಗಸ್ಟ್‌ 6 ರ ರಾತ್ರಿ 10.30ಕ್ಕೆ ಹೊಳೆಹೊನ್ನೂರು ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಹಾಸನ ಮೂಲದ ಸುರೇಶಗೌಡ (53) ಅವರು ನಡೆದುಕೊಂಡು ಹೋಗುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಾಯಗೊಂಡಿದ್ದ ಅವರನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಅಂತಿಮವಾಗಿ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸುರೇಶಗೌಡ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸುರೇಶ್‌ ಗೌಡ ಅವರು ಅವರ ಸಂಬಂಧಿಯ ಜೊತೆಗೆ ಹೊಳೆಹೊನ್ನೂರಿನಲ್ಲಿ ಬೇಕರಿ ನೋಡಿಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುರೇಶ್‌ ಗೌಡ ಅವರಿಗೆ ಚಿಕಿತ್ಸೆ ಕೊಡಿಸುತ್ತಿದ್ದ ಹಿನ್ನೆಲೆ ಅವರ ಪುತ್ರ ತಡವಾಗಿ ದೂರು ನೀಡಿದ್ದಾರೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ