ಕುವೆಂಪು ವಿವಿಗೆ ರಜೆ ಘೋಷಣೆ, ಪರೀಕ್ಷೆ ಮುಂದೂಡಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದ ಬೆನ್ನಿಗೆ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಆ.16ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Shimoga Nanjappa Hospital

ಆ.16ರಂದು ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಅವರು ರಜೆ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುವೆಂಪು ವಿವಿಗೂ ರಜೆ ಘೋಷಿಸಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆಪ್ರೊ. ವೀರಭದ್ರಪ್ಪ, ಕುಲಪತಿ, ಕುವೆಂಪು ವಿವಿ

ಪರೀಕ್ಷೆ ಮುಂದೂಡಿಕೆ

ಆ.16ರಂದು ಎಂಎಸ್ಸಿ (ಹಾನರ್ಸ್) ಮತ್ತು ಪಿ.ಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು. ಈ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಕೆ.ನವೀನ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ – BREAKING NEWS | ಶಿವಮೊಗ್ಗ, ಭದ್ರಾವತಿ ಪಟ್ಟಣದ ಶಾಲೆ, ಕಾಲೇಜಿಗೆ ರಜೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment