ಬಿಆರ್‌ಪಿ ಬಳಿ ಬೈಕ್ ಅಪಘಾತ, ಮಗುವಿಗೆ ಗಾಯ, ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವರು

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 14 ಜನವರಿ 2022

ಸುದ್ದಿಯ ಮುಂದಿನ ಭಾಗ ಕೆಳಗಿದೆ

ರಸ್ತೆಯಲ್ಲಿ ದಿಢೀರ್ ಅಡ್ಡ ಬಂದ ಹಸುವಿಗೆ ಬೈಕ್ ಡಿಕ್ಕಿಯಾಗಿ ಒಂದು ಮಗು ಗಾಯಗೊಂಡಿತ್ತು. ಇದೆ ಮಾರ್ಗದಲ್ಲಿ ಬರುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ತಮ್ಮ ಬೆಂಗಾವಲು ವಾಹನದಲ್ಲಿ ಮಗುವನ್ನು ಆಸ್ಪತ್ರೆಗೆ ಕಳುಹಿಸಿ ಕರ್ತವ್ಯ ಪ್ರಜ್ಞೆ ಮರೆದಿದ್ದಾರೆ. ಅಲ್ಲದೆ ಆಸ್ಪತ್ರೆಗೆ ತೆರಳಿ ಮಗುವಿನ ಆರೋಗ್ಯವನ್ನು ವಿಚಾರಿಸಿದ್ದಾರೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

Shivamogga Live Promotion

ಬಿ.ಆರ್.ಪಿ ಬಳಿ ಅಪಘಾತ ಸಂಭವಿಸಿದೆ. ಮುತ್ತಿನಕೊಪ್ಪದ ದಂಪತಿ ಮಗುವಿನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಹಸುವೊಂದು ದಿಢೀರ್ ಅಡ್ಡ ಬಂದಿದೆ. ಹಸುವಿಗೆ ಬೈಕ್ ಡಿಕ್ಕಿಯಾಗಿ ದಂಪತಿ, ಮಗು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಮಗುವಿಗೆ ಗಾಯವಾಗಿದೆ.

ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವರು

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನಿಂದ ತೀರ್ಥಹಳ್ಳಿಗೆ ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಬಿ.ಆರ್.ಪಿ ಬಳಿ ಬರುತ್ತಿದ್ದಾಗ ಅಪಘಾತ ಸಂಭವಿಸಿರುವುದು ಗಮನಕ್ಕೆ ಬಂದಿದೆ. ಬೆಂಗಾವಲು ವಾಹನ ಸಿಬ್ಬಂದಿಗೆ ಮಗುವನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.

ಮಗುವನ್ನು ಕೂಡಲೆ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಗುವಿನ ಆರೋಗ್ಯ ವಿಚಾರಿಸಿದರು. ಅಲ್ಲದೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ನೆರವು ನೀಡುವಂತೆ ಪೊಲೀಸ್ ಸಿಬ್ಬಂದಿಗೆ ತಿಳಿಸಿದರು.

ABOUT ME DECEMBER REPORT

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment