ಭದ್ರಾವತಿ: ಯರೇಹಳ್ಳಿ ಬಸಾಪುರ ಗ್ರಾಮದಲ್ಲಿ ಮನೆಯೊಂದರ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಹಾಗೂ ನಗದು ಕಳವು ಮಾಡಲಾಗಿದೆ.
ಆಶಾ ಕಾರ್ಯಕರ್ತೆ ಪವಿತ್ರಾ ಎಂಬುವರರ ಮನೆಯಲ್ಲಿ ಕಳ್ಳತನ ನಡೆದಿದೆ. ಪವಿತ್ರಾ ಅವರು, ಭದ್ರಾವತಿಯ ತಮ್ಮ ತಾಯಿ ಮನೆಗೆ ತೆರಳಿದ್ದರು. ಮರುದಿನ ವಾಪಸ್ ಬಂದು ನೋಡಿದಾಗ, ಮನೆಯ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಹಾಲ್‌ನಲ್ಲಿದ್ದ ಅಲ್ಮೇರಾ ಒಡೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿತ್ತು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಲಾಕರ್‌ನಲ್ಲಿಟ್ಟಿದ್ದ ಸುಮಾರು 27.5 ಗ್ರಾಂ ತೂಕದ ಅಂದಾಜು ₹1,70,000 ಮೌಲ್ಯದ ಚಿನ್ನದ ಆಭರಣಗಳು, 109 ಗ್ರಾಂ ತೂಕದ ₹19,500 ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ 2 ಲಕ್ಷ ನಗದು ಸೇರಿ ಒಟ್ಟು ₹3,89,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:➤ ಮಗುವಿಗೆ ಔಷಧ ತರಲು ಬೈಕ್ನಲ್ಲಿ ಹೋಗಿದ್ದ ವ್ಯಕ್ತಿಗೆ ಟ್ರಾಕ್ಟರ್ ಡಿಕ್ಕಿ, ಗಂಭೀರ ಗಾಯ, ಹೇಗಾಯ್ತು ಘಟನೆ?