ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 MAY 2021
ಇಂದಿರಾ ಕ್ಯಾಂಟೀನ್ ಮೂಲಕ ನಿರ್ಗತಿಕರಿಗೆ ಉಚಿತವಾಗಿ ತಿಂಡಿ, ಊಟ ವಿತರಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ ಭದ್ರಾವತಿಯ ಇಂದಿರಾ ಕ್ಯಾಂಟೀನ್‍ನಲ್ಲಿ ಆಹಾರವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ತಾಲೂಕು ಬಿಜೆಪಿ ಘಟಕ ಆರೋಪಿಸಿದೆ.
ಭದ್ರಾವತಿ ಬಸ್ ನಿಲ್ದಾಣದ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ದಿಢೀರ್ ಭೇಟಿ ನೀಡಿದ ಬಿಜೆಪಿ ಕಾರ್ಯಕರ್ತರು, ಆಹಾರ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಇಂದಿರಾ ಕ್ಯಾಂಟೀನ್‍ನಲ್ಲಿ ಪ್ರತಿದಿನ ಸಾವಿರ ಮಂದಿಗೆ ಅಡುಗೆ ಮಾಡಲಾಗುತ್ತಿದೆ. ಆದರೆ ಕ್ಯಾಂಟೀನ್‍ನಲ್ಲಿ ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಊಟ, ಉಪಹಾರ ನೀಡಲಾಗುತ್ತಿದೆ. ಉಳಿದ ಆಹಾರವನ್ನು ನಗರಸಭೆ ಆಯುಕ್ತರು ದುರಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ತಾಲೂಕು ಅಧ್ಯಕ್ಷ ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಶ್ರೀನಾಥ್, ಉಪಾಧ್ಯಕ್ಷರಾದ ಮಣಿ, ಪ್ರಮುಖರಾದ ರಾಮನಾಥ ಬರ್ಗೆ, ಅವಿನಾಶ್, ಚನ್ನೇಶ್, ನಗರಸಭಾ ಸದಸ್ಯರಾದ ಪಲ್ಲವಿ ದಿಲೀಪ್, ಸವಿತಾ ಉಮೇಶ್, ಮೋಹನ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















